ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿ ಅರ್ಚನಾ. ಎಸ್, ಕೆ-ಸೆಟ್ 2025 ಪರೀಕ್ಷೆಯ ಪತ್ರಿಕೋದ್ಯಮ ವಿಷಯದಲ್ಲಿ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.
ನ. 2 ರಂದು ರಾಜ್ಯಾದ್ಯಂತ ಈ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ನಡೆದಿತ್ತು. ಇವರು ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮೂಲತಃ ಕಲ್ಲಡ್ಕದವರಾದ ಇವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ.











