23.5 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಚ್ಚಿನ ಪ್ರಾ.ಕೃ.ಪ.ಸ. ಸಂಘದ ನೂತನ ಕಟ್ಟಡಕ್ಕೆ ರೂ.7 ಲಕ್ಷ ಚೆಕ್ ಹಸ್ತಾಂತರ

ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇವರಿಂದ ರೂ.7 ಲಕ್ಷ ಮೊತ್ತದ ಚೆಕ್ ನ್ನು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರು ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಇವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಯಕ್ಷಣ್ ರವರ ಸಮ್ಮುಖದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ|| ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ನಿರ್ದೇಶಕರಿಗೆ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ರವರಿಗೆ ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರ್ವ ಸದಸ್ಯರ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ✍️ಹರ್ಷ ಬಳ್ಳಮಂಜ

Related posts

ಹುಣ್ಸೆಕಟ್ಟೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ 26ನೇ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya
error: Content is protected !!