September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

ಉಜಿರೆ:ನ25.”ಪಡೆದ ಉಪಕಾರವನ್ನು ನೆನಪು ಮಾಡಿಕೊಂಡಾಗ ನಾವು ಕೃತಜ್ಞರಾಗುತ್ತೇವೆ ಹಾಗೂ ಪೂಜ್ಯರ ಮಾರ್ಗದರ್ಶನದೊಂದಿಗೆ ಎಸ್.ಡಿ.ಎಮ್ ಸಂಸ್ಥೆಯಲ್ಲಿ ವಿದ್ಯೆಯನ್ನು ಪಡೆಯುತ್ತಿರುವ ನೀವು ನಾವೆಲ್ಲರೂ ಧನ್ಯರು” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ರಿಜಿಸ್ಟ್ರಾರ್ ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಧರ ಭಟ್ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮದ ಅಂಗವಾಗಿ ಆಯೋಜಿಸಿದ “ಸಂಸ್ಥಾಪಕರ ದಿನ (Founder’s day)” ಶೀರ್ಷಿಕೆಯಲ್ಲಿ ನಡೆದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ, ಶಾಲಾ ವಿದ್ಯಾರ್ಥಿಗಳು ರಚಿಸಿದ ಸುವಿಚಾರ ಪುಸ್ತಕ ಹಾಗೂ ಸ್ಕ್ರಾಪ್ ಪುಸ್ತಕವನ್ನು ಬಿಡುಗಡೆಗೊಳಿಸಿ, ಪೂಜ್ಯರು ನಡೆದು ಬಂದ ಹಾದಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ದಾನ ಪರಂಪರೆಯ ಕುರಿತು ಮೌಲ್ಯಾಧಾರಿತ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಂದ ಪೂಜ್ಯರಿಗೆ ಶುಭಾಶಯ ಭಾಷಣ, 6ನೇ ಹಾಗೂ 8ನೇ ತರಗತಿಯ ವಿದ್ಯಾರ್ಥಿನಿಯರಿಂದ ಶಿಕ್ಷಕಿ ಸುಮಾ ಶ್ರೀನಾಥ್ ಅವರು ರಚಿಸಿರುವ ಪದ್ಯದ ಗುಂಪು ಗಾಯನ, ವಿದ್ಯಾರ್ಥಿಗಳಿಂದ ಪಂಚ ದಾನಗಳಾದ ವಿದ್ಯಾದಾನ, ಅನ್ನದಾನ, ವಸ್ತ್ರದಾನ, ಔಷಧದಾನ ಹಾಗೂ ವಸತಿ ದಾನಗಳ ಪ್ರಸ್ತುತಿ, 8ನೇ ತರಗತಿ ವಿದ್ಯಾರ್ಥಿನಿಯರಿಂದ ಸಮೂಹ ನೃತ್ಯ ಆಯೋಜಿಸಲಾಗಿತ್ತು.

ಪೂಜ್ಯರ ಜನ್ಮದಿನದ ಅಂಗವಾಗಿ ಶಾಲೆಯಲ್ಲಿ ತರಗತಿವಾರು ವಿದ್ಯಾರ್ಥಿಗಳಿಗೆ ಚಿತ್ರಕಲೆ, ಸ್ಕ್ರಾಪ್ ಪುಸ್ತಕ ತಯಾರಿ, ಭಿತ್ತಿ ಚಿತ್ರ ತಯಾರಿ, ಪೋಸ್ಟರ್ ತಯಾರಿ, ಶುಭಾಶಯ ಪತ್ರ ತಯಾರಿ ಮುಂತಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಇದರ ಪ್ರದರ್ಶನ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ

Suddi Udaya

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya
error: Content is protected !!