32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಜನಜಾಗೃತಿ ವೇದಿಕೆ ಕಣಿಯೂರು ವಲಯ ಮತ್ತು ಶ್ರೀ ಉಮಾಮಹೇಶ್ವರ ದೇವಸ್ಥಾನ ಮಲ್ಲೆಂಗಲ್ಲು ಇದರ ಜಂಟಿ ಆಶ್ರಯದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲ್ಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸದಾನಂದ ಮೆಲ್ಲಂಟ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಮಾಜಿ ತಾಲೂಕು ಸಮಿತಿ ಸದಸ್ಯರು ಶ್ರೀಮತಿ ರಾಜಶ್ರೀ ಎಸ್.ಹೆಗ್ಡೆ ರವರು ಪೂಜ್ಯರು ಸಮಾಜಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಾಹಿತಿ ನೀಡಿದರು. ವಿಶೇಷ ಆಹ್ವಾನಿತರಾಗಿ ಧರ್ಣಪ್ಪ ಗೌಡ ಬಾನಡ್ಕ ಒಕ್ಕೂಟದ ವಲಯಾಧ್ಯಕ್ಷರಾದ ರಮಾನಂದ ಪೂಜಾರಿ ಹಾಗೂ ಉಮಾಮಹೇಶ್ವರ ದೇವಸ್ಥಾನ ಮಲ್ಲೆಂಗಲ್ಲು ಇದರ ಆಡಳಿತ ಮೊಕ್ತೇಸರರಾದ ಚಿದಾನಂದ ರಾವ್ ಕೊಲ್ಲಜೆ ಉಪಸ್ಥಿತರಿದ್ದರು.


ರೈತ ಬಂಧು ಮಾಲಕರು ಶಿವಶಂಕರ್ ನಾಯಕ್ ರವರು ಸ್ವಾಗತಿಸಿ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ಸೀತಾ ಪ್ರಾರ್ಥನೆ ಮಾಡಿದರು.ಕಣಿಯೂರು ವಲಯದ ಮೇಲ್ವಿಚಾರಕರಾದ ಶಿಲ್ಪಾ ರವರು ಕಾರ್ಯಕ್ರಮವನ್ನು ನಿರೂಪಿಸಿದರು, ಸೇವಾಪ್ರತಿನಿಧಿಯಾದ ಸೀತಾರಾಮ ಆಳ್ವ ರವರು ಧನ್ಯವಾದ ನೀಡಿದರು. ಈ ಸಂಧರ್ಭದಲ್ಲಿ ಜನಜಾಗೃತಿ ವಲಯಾಧ್ಯಕ್ಷ ಪ್ರಫುಲ್ಲ ಚಂದ್ರ ಅಡ್ಯಂತಾಯ, ಸಿಎ ಬ್ಯಾಂಕ್ ಪದ್ಮುಂಜ ಇದರ ಅಧ್ಯಕ್ಷ ರಕ್ಷಿತ್ ಶೆಟ್ಟಿ, ತಿಮ್ಮಯ್ಯ ಗೌಡ ಪದ್ಮುಂಜ, ಸುದರ್ಶನ ಹೆಗ್ಡೆ ಕಣಿಯೂರು ಗುತ್ತು, ಸೀತಾರಾಮ ಮಡಿವಾಳ ಗ್ರಾಮ ಪಂಚಾಯತ್ ಅಧ್ಯಕ್ಷರು ಕಣಿಯೂರು, ವಿಠಲ ಶೆಟ್ಟಿ ಕೊಲ್ಲೊಟ್ಟು ಹಾಗೂ ಊರಿನ ಗಣ್ಯರು, ಊರಿನ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya
error: Content is protected !!