ತಣ್ಣೀರುಪಂತ : ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ತಣ್ಣೀರುಪಂತ ವಲಯದ ಕುಪ್ಪೆಟ್ಟಿ ಕಾರ್ಯಕ್ಷೇತ್ರದ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಲೇಜಿಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಿಯಾಳ ಅಭಿಷೇಕ ಮಾಡಿಲಾಯಿತು.
ಈ ಸಂಧರ್ಭದಲ್ಲಿ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷ ಪ್ರಭಾಕರ ಪೊಸಂದೋಡಿ, ಸದಸ್ಯರಾದ ಸುರೇಶ್ ಎಚ್.ಎಲ್ ಹಾಗೂ ಒಕ್ಕೂಟದ ಪದಾಧಿಕಾರಿಗಳು , ಸಂಘದ ಸದಸ್ಯರು, ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.











