37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

ಬೆಳ್ತಂಗಡಿ : ಪ್ರಧಾನಿ ನರೇಂದ್ರ ಮೋದಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.

ಹಿಂದಿನ ಸಾಧನೆಯ ನೆಲೆಯಲ್ಲಿ ಇತರರ ಜೀವನದಲ್ಲಿ ಧನಾತ್ಮಕ ಸುಧಾರಣೆಗೆ ಪ್ರಯತ್ನಿಸಬೇಕಾಗಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ತ್ಯಾಗಮಯ ಸೇವೆ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸ್ವಾತಂತ್ರೋತ್ಸವದ ಅಮೃತವರ್ಷ ಆಚರಣೆಯ ಶುಭಾವಸರದಲ್ಲಿ ನಾವು ಪ್ರಗತಿ ಹೊಂದಿದ ಸಂಪದ್ಭರಿತ ಭಾರತ ನಿರ್ಮಾಣಕ್ಕೆ ಪ್ರಯತ್ನಿಸಬೇಕು. ನಿಮ್ಮ ನಿರಂತರ ಪ್ರಯತ್ನ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂಬ ನಂಬಿಕೆ ನಮಗಿದೆ.

ನಿಮಗೆ ಸುಖ-ಶಾಂತಿ, ಸಂತೋಷ ಮತ್ತು ಆರೋಗ್ಯ ಸದಾ ಇರಲೆಂದು ಹಾರೈಸುತ್ತೇನೆ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡಾ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.ಗೃಹಸಚಿವ ಅಮಿತ್ ಶಾ ಕೂಡಾ ದೂರವಾಣಿ ಮೂಲಕ ಜನ್ಮದಿನದ ಶುಭಾಶಯ ಕೋರಿದ್ದಾರೆ.

Related posts

ಬಯಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ವತಿಯಿಂದ ಬಾಲಕಿಯರ ಶೌಚಾಲಯ ಕೊಡುಗೆ

Suddi Udaya

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya
error: Content is protected !!