September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

ಉಜಿರೆ: ಶಾಲಾ ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಹಾಗೂ ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ನ. 25ರಂದು ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಅನುಗ್ರಹ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂ. ಫಾ. ಅಬೆಲ್ ಲೋಬೊ ವಹಿಸಿಕೊಂಡಿದ್ದರು. ಸ್ಪರ್ಧೆಯ ನೋಡಲ್ ಅಧಿಕಾರಿಯಾದ ಶ್ರೀ ಸಿದ್ದಲಿಂಗ ಸ್ವಾಮಿ ಅವರು ಪ್ರಾಸ್ತಾವಿಕ ಭಾಷಣ ಮಾಡಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರೀಮತಿ ತಾರಾ ಕೇಸರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸಂಶೋಧನಾ ಚಟುವಟಿಕೆ ಹಾಗೂ ಸೃಜನಶೀಲತೆಯನ್ನು ಬೆಳೆಸಿಕೊಳ್ಳಲು ಪ್ರೇರಣಾದಾಯಕ ಮಾತುಗಳನ್ನಾಡಿದರು.

ಅಧ್ಯಕ್ಷರಾದ ಶಾಲಾ ಸಂಚಾಲಕರು ತಮ್ಮ ಅಧ್ಯಕ್ಷೀಯ ಮಾತುಗಳಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳ ಶ್ರಮ ಮತ್ತು ಪ್ರತಿಭೆಯನ್ನು ಮೆಚ್ಚಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ವಿಜ್ಞಾನ ಶಿಕ್ಷಕರ ಸಂಘದ ಅಧ್ಯಕ್ಷ ರಾಧಾಕೃಷ್ಣ, ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ, ಶಾಲಾ ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ ಆಂಟನಿ ಪೆರ್ನಾಂಡಿಸ್, ಶಾಲಾ ಪ್ರಾಂಶುಪಾಲರಾದ ವಂ. ಫಾ. ವಿಜಯ್ ಲೋಬೊ ಹಾಗೂ ತೀರ್ಪುಗಾರರಾದ ಹರ್ಷಿತ್, ಜೆರಾಲ್ಡ್, ಶರತ್ ಕುಮಾರ್ ಮತ್ತು ಶ್ರೀಮತಿ ರಾಜೇಶ್ವರಿ ಉಪಸ್ಥಿತರಿದ್ದರು.

ಸಹಶಿಕ್ಷಕಿ ಶ್ರೀಮತಿ ಹೇಮಲತಾ ಸ್ವಾಗತ ಮಾಡಿ, ಸಹಶಿಕ್ಷಕ ಗಣೇಶ್ ಕಾರ್ಯಕ್ರಮವನ್ನು ನಿರೂಪಿಸಿದರು. ಸಹಶಿಕ್ಷಕಿ ಶ್ರೀಮತಿ ಮೇಘನಾ ವಂದನೆ ಸಲ್ಲಿಸಿದರು.

ಸಮಾರೋಪ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಸಲಾಗಿದ್ದು, ಎಲ್ಲ ವಿಜೇತರನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿಗಳ ವಿಜ್ಞಾನಾಧಾರಿತ ಹೊಸ ಪ್ರಯೋಗಗಳು, ಮಾದರಿಗಳು ಮತ್ತು ಸೃಜನಶೀಲ ಕೃತಿಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾದವು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ “ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ” ಆಯ್ಕೆ

Suddi Udaya
error: Content is protected !!