ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡಾಕೂಟ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಆಶ್ರಯದಲ್ಲಿ ಯುವಬಿಲ್ಲವ ವೇದಿಕೆ ಬಿಲ್ಲವ ಮಹಿಳಾ ವೇದಿಕೆ ಸಹಕಾರದೊಂದಿಗೆ ಡಿ. 7ರಂದು ನಡೆಯಲಿರುವ ಕೋಟಿ ಚೆನ್ನಯ ಕ್ರೀಡಾಕೂಟ 2025 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ ಧರ್ಮಸ್ಥಳ ಗ್ರಾಮದಲ್ಲಿ ನಡೆಯಿತು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರನ್ನು ವೇದಿಕೆಯಲ್ಲಿ ಗೌರವಿಸಲಾಯಿತು. ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಜಯವಿಕ್ರಂ ಕಲ್ಲಾಪು ಇವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸುಂದರ ಪೂಜಾರಿ, ಜೊತೆ ಕಾರ್ಯದರ್ಶಿ ಸಂತೋಷ್ ಉಪ್ಪಾರ್, ಯುವ ಬಿಲ್ಲವ ವೇದಿಕೆ ಕ್ರೀಡಾ ಕಾರ್ಯದರ್ಶಿ ದೇವಿಪ್ರಸಾದ್, ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಡಿ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲಾ ಪರಮೇಶ್ವರ್, ಧರ್ಮಸ್ಥಳ ಗ್ರಾಮ ಸಮಿತಿ ಅಧ್ಯಕ್ಷ ಪ್ರಕಾಶ್ ಪೂಜಾರಿ, ಎಸ್.ಎನ್.ಡಿ.ಪಿ ಉಪಾಧ್ಯಕ್ಷ ಸಚಿನ್ ಇಂಚರ, ಪಂಚಾಯತ್ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ , ಪಂಚಾಯತ್ ಸದಸ್ಯರಾದ ಸುನಿತಾ ಶ್ರೀಧರ್ ಪೂಜಾರಿ, ಶ್ರೀ ನಾರಾಯಣ ಗುರು ಗ್ರಾಮ ಸಮಿತಿ ಗೌರವ ಅಧ್ಯಕ್ಷ ಪುರುಷೋತ್ತಮ್ ಪೂಜಾರಿ ಮೂಡಂಗಲ್, ಕಾರ್ಯದರ್ಶಿ ಯಶೋಧರ ಪೂಜಾರಿ, ಉಪಾಧ್ಯಕ್ಷ ಶ್ರೀಧರ್ ಪೂಜಾರಿ, ಪ್ರಭಾಕರ್ ಪೂಜಾರಿ ಧರ್ಮಸ್ಥಳ, ವೇದ ಪ್ರಭಾಕರ, ಸದಾಶಿವ ಕಾಮದೇನು, ರಘು ದೊಂಡೋಲೆ, ವಸಂತ ಸುವರ್ಣ, ಶ್ರೀ ಗುರುದೇವ ಸಂಘ ಜೋಡುಸ್ಥಾನ ಸದಸ್ಯರು ಮತ್ತು ಧರ್ಮಸ್ಥಳ ಗ್ರಾಮ ಸಮಿತಿ ಪದಾಧಿಕಾರಿಗಳು ಹಾಗೂ ಎಸ್.ಎನ್.ಡಿ.ಪಿ ಧರ್ಮಸ್ಥಳ ಸದಸ್ಯರು ಉಪಸ್ಥಿತರಿದ್ದರು.

ಸೂರ್ಯ ಪ್ರಕಾಶ್ ದೊಂಡೋಲೆ ಕಾರ್ಯಕ್ರಮ ನಿರೂಪಿಸಿ, ರೂಪೇಶ್ ಧರ್ಮಸ್ಥಳ ಸ್ವಾಗತಿಸಿದರು.

Related posts

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

Suddi Udaya

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya

ಬೆಳ್ತಂಗಡಿ ಗಣೇಶೋತ್ಸವ ಜಲಸ್ಥಂಭನ ಶೋಭಾಯಾತ್ರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂ ಎಲ್ ಸಿ ಕಿಶೋರ್ ಕುಮಾರ್ ಬೊಟ್ಯಾಡಿ ಭಾಗಿ

Suddi Udaya
error: Content is protected !!