September 6, 2026
ಶಿಕ್ಷಣ ಸಂಸ್ಥೆ

ಪ್ರಸನ್ನ ಆಯುರ್ವೇದ ಮತ್ತು ನರ್ಸಿಂಗ್ ಕಾಲೇಜುಗಳ ಪದವಿ ಪ್ರದಾನ‌ ಸಮಾರಂಭ

ಬೆಳ್ತಂಗಡಿ:ಗುರು ಶಿಷ್ಯರು, ತಂದೆ ತಾಯಿ ಮೊದಲಾದ ಸಂಬಂಧಗಳೇ ನಶಿಸಿ‌ಹೋಗಿರುವ ಸಮಾಜದಲ್ಲಿ ವೈದ್ಯರು ಮತ್ತು ದಾದಿಯರು ತಾಯಿ‌ಹೃದಯದ ಮೂಲಕ ತಮ್ಮ ಸೇವೆ ಸಲ್ಲಿಸಿ ಮತ್ತೆ ಈ ಸಂಬಂಧಗಳನ್ನು ಮತ್ತೆ ಬೆಸೆದು ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಅಣಿಯಾಗಬೇಕಾದ ಅಗತ್ಯತೆ ಇದೆ ಎಂದು ವಿಧಾನ ಪರಿಷತ್ ಶಾಸಕ ಎಸ್.ಎಲ್ ಭೋಜೇ ಗೌಡ ಹೇಳಿದರು.

ಅವರು ನ 26 ರಂದು ಲಾಯಿಲ ಕಾಶಿಬೆಟ್ಟು ಇಲ್ಲಿನ
ಪ್ರಸನ್ನ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜು ಇದರ ಪ್ರಸ್ತುತ ಸಾಲಿನ ಪದವಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಉದ್ಘಾಟನಾ ಭಾಷಣದಲ್ಲಿ ಅವರು ಮಾತನಾಡಿದರು.

ಶಿಕ್ಷಣ ಮತ್ತು ಆರೋಗ್ಯ ಇಂದು ಉಳ್ಳವರ ಪಾಲಾಗಿದೆ. ಸಂವಿಧಾನದ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿ ಕೂಡ ಶಿಕ್ಷಣ ಪಡೆದು ಉತ್ತಮ ಸಮಾಜ ಕಟ್ಟುವ ಕೈಂಕರ್ಯದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಭೋಜೇ ಗೌಡ ಹೇಳಿದರು.

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯ ಇದರ ಪ್ರಚಾರ್ಯ ಡಾ. ಲೀಲಾಧರ ಡಿ.ವಿ ಮಾತನಾಡಿ, ಶಿಕ್ಷಕರು ಮತ್ತು ವಿದ್ಯಾರ್ಥಿ ಇಬ್ಬರೂ ಹೃದಯ ಬೆಸೆದುಕೊಂಡಲ್ಲಿ ಮಾತ್ರ ಉತ್ತಮ ಶಿಕ್ಷಣದ ವಾತಾವರಣ ನಿರ್ಮಾಣವಾಗಲು ಸಾಧ್ಯ ಎಂದರು. ಆಳ್ವಾಸ್ ನರ್ಸಿಂಗ್ ಕಾಲೇಜು ಪ್ರಾಚಾರ್ಯ ಡಾ. ಯತಿ ಕುಮಾರ ಸ್ವಾಮಿ ಗೌಡ, ಚಿಕ್ಕಮಗಳೂರಿನ ಖ್ಯಾತ ದಂತ ವೈದ್ಯ ಡಾ. ಸುಂದರ ಗೌಡ, ಪ್ರಸನ್ನ ಆಯರ್ವೇದ ಕಾಲೇಜು ನಿವೃತ್ತ ವಿಭಾಗ ಮುಖ್ಯಸ್ಥ ಡಾ. ಶ್ರೀ ಕುಮಾರ್ ಶುಭ ಕೋರಿದರು.

ವೇದಿಕೆಯಲ್ಲಿ ಪ್ರಾಂಶುಪಾಲರುಗಳಾದ ಡಾ. ಫ್ಲೇವಿಯಾ ಕ್ಯಾಸ್ಟಲಿನೋ ಮತ್ತು ಡಾ. ಯತೀಶ್ ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ. ಪ್ರಶಾಂತ ಬಿ.ಕೆ ಸ್ವಾಗತಿಸಿ ಪ್ರಸ್ತಾವನೆಗೈದರು. ಪ್ರಸನ್ನ ಆಯುರ್ವೇದ ಆಸ್ಪತ್ರೆಯ
ನಿವೃತ್ತ ವಿಭಾಗ ಮುಖ್ಯಸ್ಥ ಡಾ. ಶ್ರೀಕುಮಾರ್ ಮತ್ತು ಡಾ. ಸುಂದರ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಂಕಿತಾ ಪ್ರಾರ್ಥನೆ ಹಾಡಿದರು. ಡಾ. ಈಶ್ವರಚಂದ್ರ ಪ್ರಮಾಣವಚನ ಬೋಧಿಸಿದರು.ಗುರುನಾಥ ಪಾಟೀಲ್ ವಂದಿಸಿದರು. ಡಾ. ಮಹೇಶ್ ಪ್ರಸನ್ನ , ಡಾ. ವೃಂದಾ ಬೆಡೇಕರ್ ಮತ್ತು ಡಾ. ಶೃತಿ ಕಾರ್ಯಕ್ರಮ ನಿರೂಪಿಸಿದರು.


ಯಶಸ್ಸಿನ ಶಿಖರವೇರಲು ಪರಿಶ್ರಮ ಮುಖ್ಯ :ಗಂಗಾಧರ ಗೌಡ

ಅಧ್ಯಕ್ಷತೆ ವಹಿಸಿದ್ದ ಪ್ರಸನ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಾಜಿ ಸಚಿವ ಗಂಗಾಧರ ಗೌಡ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಆಯುರ್ವೇದ ಮತ್ತು ನರ್ಸಿಂಗ್ ಕಾಲೇಜು ಆರಂಭಿಸಲು ನಾವು ಅನೇಕ ಸವಾಲುಗಳನ್ನು ಎದುರಿಸಿದ್ದೆವು. ಇಂದು ಎಲ್ಲಾ ಮೂಲಭೂತ ಸೌಲಭ್ಯಗಳೊಂದಿಗೆ ನಾವು ಈ ಮಟ್ಟಕ್ಕೆ ಬೆಳೆದಿದ್ದೇವೆ. ಯಶಸ್ಸು ಸಾಧಿಸಲು ಎಲ್ಲರೂ ಸೇರಿ ಯುದ್ದ ಗೆಲ್ಲಬೇಕಿದೆ ಎಂದರು.

Related posts

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಶೇ. 97.82 ಫಲಿತಾಂಶ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಅಂಡಿಂಜೆ ಶಾಲೆಯ ವಿದ್ಯಾರ್ಥಿಗಳಾದ ನಮಿಷ ತಾಲೂಕಿಗೆ ಪ್ರಥಮ ಹಾಗೂ ಕು .ಪ್ರಜ್ಞಾ ತಾಲೂಕಿಗೆ ದ್ವಿತೀಯ ಸ್ಥಾನ

Suddi Udaya

ಸರಕಾರಿ ಪ್ರೌಢಶಾಲೆ ನಡದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ:ಪೋಷಕರೇ ತಮ್ಮ ಮಕ್ಕಳಿಗೆ ಶಿಕ್ಷಕರಾಗಿ ಬೋಧನೆ

Suddi Udaya
error: Content is protected !!