37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭ ವಿವಾಹ

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ನೆಡಿಂಜಾರು ನಿವಾಸಿ ಚಂದ್ರಕಾಂತ್ ಹಾಗೂ ಬೆಳಾಲು ಕಡಂಬಿಲ ನಿವಾಸಿ ಸವಿತಾ ಅವರು ನ.24 ರಂದು ನಡ ಗ್ರಾಮದ ಕುತ್ರೊಟ್ಟು ದೇವಸ್ಥಾನದಲ್ಲಿ ವಿವಾಹವಾಗಿ ನ.27 ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಬೆಳಾಲು ನಿವಾಸಿ ಸವಿತಾ (24 ವ) ಅವರು ನ.24ರಂದು ಉಜಿರೆಗೆ ಕೆಲಸಕ್ಕೆಂದು ಹೋದವರು ಕೆಲಸಕ್ಕೂ ಹೋಗದೆ, ಮನೆಗೆ ವಾಪಸ್ಸು ಬಾರದೆ ಕಾಣೆಯಾಗಿದ್ದಾರೆ. ಅವರ ಮೊಬೈಲ್ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿದೆ ಎಂದು ಅವರ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು.

ಇದೀಗ ಅವರು ನೆರಿಯ ನಿವಾಸಿ ಚಂದ್ರಕಾಂತ್(26ವ) ಅವರನ್ನು ಕುತ್ರೋಟ್ಟು ದೇವಸ್ಥಾನದಲ್ಲಿ ವಿವಾಹವಾಗಿ, ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆಯನ್ನು ನೀಡಿದ್ದಾರೆ. ಇವರಿಬ್ಬರು ಸುಳ್ಯದಲ್ಲಿ ರಿಜಿಸ್ಟ್ರರ್ ಮ್ಯಾರೇಜ್ ಆಗಿ ಬಳಿಕ ಇಲ್ಲಿಯ ದೇವಸ್ಥಾನದಲ್ಲಿ ವಿವಾಹವಾದರೆನ್ನಲಾಗುತ್ತಿದೆ. ಪೊಲೀಸರು ಇಬ್ಬರ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya

ಫೆ.20 ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಂಸ್ಕೃತಿಕ ವೈಭವ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya
error: Content is protected !!