25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮುಂಡಾಜೆ: ಶಾಸಕಾಂಗ ಕಾರ್ಯಾಂಗ ಮತ್ತು ನ್ಯಾಯಾಂಗಗಳು ಸ್ವತಂತ್ರವಾಗಿದ್ದರೂ ಪರಸ್ಪರ ಪೂರಕವಾಗಿ ಕೆಲಸ ನಿರ್ವಹಿಸಬೇಕು. ಆದರೆ ಸುಮಾರು 88000 ಇತ್ಯರ್ಥವಾಗದ ವ್ಯಾಜ್ಯಗಳಿದ್ದರೂ ಅದನ್ನು ಇತ್ಯರ್ಥಪಡಿಸದೆ ಸುಪ್ರೀಂ ಕೋರ್ಟ್ ತನ್ನ ಅತಿಯಾದ ಕ್ರಿಯಾಶೀಲತೆಯಿಂದಾಗಿ ಶಾಸಕಾಂಗ ಮತ್ತು ಕಾರ್ಯಾಂಗದ ಕಾರ್ಯನಿರ್ವಹಣೆಯ ಮೇಲೆ ಹಸ್ತಕ್ಷೇಪ ನಡೆಸಿದಂತೆ ಇತ್ತೀಚೆಗೆ ಕಂಡು ಬರುತ್ತಿದೆ ಎಂದು ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಸ್ ಚಂದ್ರ ಜೈನ್ ಅಭಿಪ್ರಾಯಪಟ್ಟರು.

ಅವರು ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿ ನ.26 ರಂದು ಕಾಲೇಜಿನ ಸಭಾಭವನದಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಕುರಿತು ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಆಂಗ್ಲ ಭಾಷಾ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

Related posts

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!