September 7, 2026
ಗ್ರಾಮಾಂತರ ಸುದ್ದಿವರದಿ

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

ಬೆಳ್ತಂಗಡಿ : ಎಸ್‌ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರನ್ನು ಹೊಂದಿರುವ ವಾರ್ಡ್ ಗಳಲ್ಲಿ ನಡೆಸಿದ ಅಭಿವೃದ್ಧಿ ಯೋಜನೆ, ಕುಂದುಕೊರತೆ, ಹಾಗೂ ಕಾರ್ಯಕರ್ತರು ಮತ್ತು ಚುನಾಯಿತ ಸದಸ್ಯರೊಂದಿಗೆ ಸಮಾಲೋಚನಾ ಸಭೆ ನಡೆಸುವ ಪಕ್ಷದ ತೀರ್ಮಾನದಂತೆ ಪಕ್ಷದ ಮಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚಾರ್ಮಾಡಿ, ಲಾಯಿಲ, ಕುವೆಟ್ಟು, ಪೆರಾಲ್ದರಕಟ್ಟೆ, ತಣ್ಣೀರುಪಂತ ಹಾಗೂ ಕುಕ್ಕಳ ವಾರ್ಡ್ ಗಳಿಗೆ ಎಸ್‌ಡಿಪಿಐ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ನಿಯೋಗವು ಬುಧವಾರದಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾಧ್ಯಕ್ಷರ ನಿಯೋಗವನ್ನು ಸ್ಥಳೀಯ ಚುನಾಯಿತ ಸದಸ್ಯರು ಹಾಗೂ ಕಾರ್ಯಕರ್ತರು ಹೂಗುಚ್ಚ ನೀಡಿ ಸ್ವಾಗತಿಸಿದರು. ಗ್ರಾಮ ಪಂ ಎಸ್‌ಡಿಪಿಐ ಬೆಂಬಲಿತ ಸದಸ್ಯರು ತಮ್ಮ ವಾರ್ಡ್ ನಲ್ಲಿ ನಡೆಸಿದ ಅಭಿವೃದ್ಧಿ ಯೋಜನೆಗಳು, ಪಂಚಾಯತ್ ವತಿಯಿಂದ ಮಾಡಿಸಿದ ಕೆಲಸ ಕಾರ್ಯಗಳ ಬಗ್ಗೆ ನಿಯೋಗಕ್ಕೆ ಮಾಹಿತಿ ನೀಡಿದರು.ನಿಯೋಗದಲ್ಲಿ ಜಿಲ್ಲಾ ಉಪಾಧ್ಯಕ್ಷರು ಇನಾಸ್ ರೋಡ್ರಿಗಸ್, ಜಿಲ್ಲಾ ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ನವಾಝ್ ಕಟ್ಟೆ, ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದೀಕ್ ಅಲೆಕ್ಕಾಡಿ, ನ್ಯಾಯವಾದಿ ಕಬೀರ್ ಕೆಮ್ಮಾರ, ಹನೀಫ್ ಪುಂಜಾಲಕಟ್ಟೆ, ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಉಪಸ್ಥಿತರಿದ್ದರು.

Related posts

ಜಯನಗರ-ಗುರಿಪಳ್ಳದಲ್ಲಿ ರಕ್ತದಾನ ಶಿಬಿರ: ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಿ : ಡಾ| ಗೋಪಾಲ ಕೃಷ್ಣ ಕೆ.

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ: ಫಲಿತಾಂಶ

Suddi Udaya

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya
error: Content is protected !!