37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ : ಕ್ರೀಡೆ ಶರೀರ ಮತ್ತು ಮನಸ್ಸಿಗೆ ಆರೋಗ್ಯವನ್ನು ನೀಡುವಂತಹುದು. ಉತ್ತಮ ಆರೋಗ್ಯದಲ್ಲಿ ವ್ಯಾಯಾಮದ ಮುಖ್ಯ ಪಾತ್ರವಿದೆ. ಹಾಗಾಗಿ ವಿದ್ಯಾರ್ಥಿಗಳು ಪಠ್ಯದ ಜತೆ ಕ್ರೀಡೆಯಲ್ಲೂ ಆಸಕ್ತಿಯಿಂದ ಭಾಗವಹಿಸಬೇಕು ‘ ಎಂದು ಟೆಲಿಕ್ವೆನ್ಸ್ ಫ್ರೈ. ಲಿಮಿಟೆಡ್ ಇದರ ನಿರ್ದೇಶಕ ಪ್ರವೀಣ್ ಗೋರೆ ಹೇಳಿದರು.

ಅವರು ನ.26 ರಂದು ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

‘ಇಂದಿನ ದಿನಗಳಲ್ಲಿ ನಮ್ಮ ಆರೋಗ್ಯದ ಕಡೆಗೆ ಹೆಚ್ಚು ಒತ್ತು ಕೊಡಬೇಕಾದ ಅಗತ್ಯವಿದೆ. ದಿನದ ಸ್ವಲ್ಪ ಸಮಯವನ್ನು ವ್ಯಾಯಾಮಕ್ಕಾಗಿ ಮೀಸಲಿಡಬೇಕು. ಹಾಗಾಗಿ ಒಂದಲ್ಲ ಒಂದು ಕ್ರೀಡೆಯಲ್ಲಿ ಅಭಿರುಚಿ ಬೆಳೆಸಿಕೊಂಡು ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಅವರು ಹೇಳಿದರು.

ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷೆ ಪ್ರೀತಿತಾ ಧರ್ಮವಿಜೇತ್ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಬದುಕು ಚದುರಂಗದಾಟವಿದ್ದಂತೆ. ಸೋಲು ಗೆಲುವುಗಳು ಸಾಮಾನ್ಯವಾದುದು. ಆದರೆ ಗೆಲುವಿನ ಕಡೆಗೆ ಸದಾ ಶ್ರಮವಿರಬೇಕು. ವಿದ್ಯಾರ್ಥಿಗಳು ಸೋಲಿಗೆ ಹತಾಶರಾಗದೆ ಕ್ರೀಡಾಸ್ಪೂರ್ತಿಯನ್ನು ಮೆರೆಯಬೇಕು’ ಎಂದರು.
ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ, ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ, ಕ್ರೀಡಾ ನಿರ್ದೇಶಕ ಭರತ್ ಇದ್ದರು.

ಉಪ ಪ್ರಾಂಶುಪಾಲ ಬಿ. ಎ.ಶಮೀವುಲ್ಲಾ ಸ್ವಾಗತಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಮಾಯಾ ಭಟ್ ಪರಿಚಯಿಸಿದರು. ಇತಿಹಾಸ ಉಪನ್ಯಾಸಕ ಹರೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಭೌತಶಾಸ್ತ್ರ ಉಪನ್ಯಾಸಕಿ ಅನನ್ಯ ವಂದಿಸಿದರು.ಕಾಲೇಜಿನ ವಿದ್ಯಾರ್ಥಿ ಸಂಘದ ಕ್ರೀಡಾ ಕಾರ್ಯದರ್ಶಿ ಪಲ್ಲವಿ ಪ್ರತಿಜ್ಜಾ ವಿಧಿ ಬೋಧಿಸಿದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya
error: Content is protected !!