ಬೆಳ್ತಂಗಡಿ : ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಬೆಳ್ತಂಗಡಿ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾಭವನ ಬೆಳ್ತಂಗಡಿ ಇಲ್ಲಿ ಭಾರತ ಸಂವಿಧಾನ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಬೆಳ್ತಂಗಡಿ ತಾಲೂಕು ಇಲ್ಲಿನ ವಿದ್ಯಾರ್ಥಿಗಳು ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿ ಪ್ರದೀಪ್ ದ್ವಿತೀಯ ಬಹುಮಾನ ಮತ್ತು 10,000 ನಗದು ಹಾಗೂ ಪ್ರಶಸ್ತಿಯನ್ನು ಪಡೆದಿರುತ್ತಾನೆ.
ತಾಲೂಕು ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಸ್ವಾತಿ.ಕೆ ತೃತೀಯ ಬಹುಮಾನ ಮತ್ತು 5000 ನಗದು ಹಾಗೂ ಪ್ರಶಸ್ತಿಯನ್ನು ಪಡೆದಿರುತ್ತಾರೆ.











