ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

ನೊಂದ ಬಾಲಕಿ ವೇಣೂರು ಠಾಣಾ ವ್ಯಾಪ್ತಿ ಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿರುವ ವೇಳೆ ಅಲ್ಲಿದ್ದ ನೊಂದ ಬಾಲಕಿಯ ಅತ್ತೆಯ ಮಗ ಬಾಲಕಿಯನ್ನು ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಒತ್ತಾಯಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಬಾಲಕಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ಬಂದ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಬಗ್ಗೆ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದು ಅದರಂತೆ
ಆರೋಪಿ ಅಮ್ಜತ್ ಖಾನ್ (18ವ) ವಿರುದ್ದ ಠಾಣೆಯಲ್ಲಿ ನ.25 ರಂದು ಪ್ರಕರಣ ದಾಖಲಿಸಲಾಗಿದೆ.

Related posts

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ

Suddi Udaya

ಪ್ರತಿಭಾ ಕಾರಂಜಿ: ರಕ್ತೇಶ್ವರಿಪದವು ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya
error: Content is protected !!