ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಉಜಿರೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಸಂವಿಧಾನ ದಿನವನ್ನು ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಮಾತನಾಡಿ ” ಪ್ರಪಂಚದಲ್ಲಿಯೇ ಅತೀ ದೊಡ್ಡ ಹಾಗೂ ಸಮಗ್ರವಾದ ಸಂವಿಧಾನ ಹೊಂದಿರುವುದು ನಮ್ಮ ದೇಶದ ಹೆಮ್ಮೆ. ಸಂವಿಧಾನದಲ್ಲಿರುವ ಹಕ್ಕು ಕರ್ತವ್ಯಗಳು ಪ್ರತಿಯೊಬ್ಬ ನಾಗರಿಕರು ನಿರ್ಭಿತಿಯಿಂದ ಜೀವಿಸಲು ಸಾಧ್ಯವಾಗಿಸಿದೆ” ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಇಲ್ಲಿನ ಸಹಾಯಕ ಪ್ರಧ್ಯಾಪಕರು ಹಾಗೂ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಟರಾಜ್ ಹೆಚ್ ಕೆ ಇವರು ಮಾತನಾಡಿ “ನಮ್ಮ ದೇಶದ ಸಂವಿಧಾನ ನಮ್ಮೆಲ್ಲರಿಗೂ ನೆಮ್ಮದಿಯಿಂದ ಬದುಕುವ ಅವಕಾಶ ಮಾಡಿಕೊಟ್ಟಿದೆ. ವಿವಿಧ ಜಾತಿ ಧರ್ಮ ಪ್ರಾದೇಶಿಕ ಭಿನ್ನತೆ ಎಲ್ಲವನ್ನು ಗಮನಿಸಿ ಸಮಾನತೆಯಿಂದ ಬದುಕುವ ಹಕ್ಕನ್ನು ನಮಗೆ ನೀಡಿದೆ. ಇದು ನಮ್ಮ ಸಂವಿಧಾನದ ವಿಶೇಷತೆ” ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರು ಸ್ವಯಂ ಸೇವಕರಿಗೆ ಸಂವಿಧಾನ ದಿನದ ಪ್ರತಿಜ್ಞಾ ವಿಧಿ ಭೋದಿಸಿದರು.
ವೇದಿಕೆಯಲ್ಲಿ ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ ಉಪಸ್ಥಿತರಿದ್ದರು.
ಸ್ವಯಂ ಸೇವಕ ಕಾರ್ತಿಕ್ ಸ್ವಾಗತಿಸಿ ವಂದಿಸಿದರು. ಸ್ವಯಂ ಸೇವಕಿ ಧನ್ಯ ನಿರೂಪಿಸಿದರು.

Related posts

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅವಳಿ‌ ಕರುಗಳಿಗೆ ಜನ್ಮ ನೀಡಿದ ಗೋಮಾತೆ

Suddi Udaya

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya
error: Content is protected !!