37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

ಬೆಳ್ತಂಗಡಿ: ಆರೋಗ್ಯ ಇಲಾಖೆಯಲ್ಲಿ ಸುಮಾರು 39 ವರ್ಷಗಳ ಕಾಲ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಬೆಳ್ತಂಗಡಿ ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ ಲೀಲಾವತಿ ಹೆಚ್.ಬಿ ಅವರು ನ.29ರಂದು ಸರಕಾರಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.

1986 ಅ.9ರಂದು ಬೆಳ್ತಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಕಿರಿಯ ಆರೋಗ್ಯ ಸಹಾಯಕಿಯಾಗಿ ಸೇವೆಗೆ ಸೇರಿದ ಅವರು ಬಳಿ ಪ್ರಾಥಮಿಕ ಆರೋಗ್ಯ ಕೇಂದ್ರ ನೆರಿಯ, ಮುಂಡಾಜೆ, ಪಡಂಗಡಿಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿಯಾಗಿ ಭಡ್ತಿಗೊಂಡು ಬಂಟ್ವಾಳ ತಾಲೂಕಿನ ಮಂಚಿ ಆರೋಗ್ಯ ಕೇಂದ್ರಕ್ಕೆ ವರ್ಗಾಗೊಂಡಿದ್ದರು. ಅಲ್ಲಿ ಪುಂಜಾಲಕಟ್ಟೆ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಿದ ಬಳಿಕ ಕಳೆದ ಆರು ವರ್ಷಗಳಿಂದ ಬೆಳ್ತಂಗಡಿ ತಾಲೂಕು ಆರೋಗ್ಯ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿ ನ.29ರಂದು ನಿವೃತ್ತಿಯಾಗಲಿದ್ದಾರೆ.

ಗುರುವಾಯನಕೆರೆ ಶಿವಾಜಿನಗರದ ನಿವಾಸಿಯಾಗಿದ್ದಾರೆ. ಪತಿ ಮಂಗಳೂರು ಎ.ಸಿ ಕಚೇರಿಯಲ್ಲಿ ಮೆನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಿ. ಗೋವಿಂದ ನಾಯ್ಕ, ಪುತ್ರಿ ಶ್ರೀಮತಿ ಚೈತ್ರ ಶಿವಪ್ರಸಾದ್ ಕೆ.ಸಿ. ಬೆಂಗಳೂರು, ಪುತ್ರ ಜ್ಞಾನೇಶ್, ಮೊಮ್ಮಗ ನಿಶ್ಚಿತ್ ಕೆ.ಸಿಯವರೊಂದಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

Related posts

ನಾರಾವಿ: ಮಧುವನ ಕಾಂಪ್ಲೆಕ್ಸ್ ನಲ್ಲಿ ವಕ್ರಾಂಗಿ ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ರಾವ್ ರಿಂದ ಮೂಡಪ್ಪ ಸೇವೆ

Suddi Udaya

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya
error: Content is protected !!