25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ,ಕ್ಷೇತ್ರ ಸಮನ್ವಯಾಧಿಕಾರಿಯವರ ಕಛೇರಿ, ಬಂಟ್ವಾಳ ಮತ್ತು ಎಸ್ ವಿ ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ. 27ರಂದು ಎಸ್ ವಿ ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ತಾಲೂಕು ಮಟ್ಟದ ಈ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಒಟ್ಟು 14 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರೌಢ ವಿಭಾಗದ ಭಾವಗೀತೆ ಸ್ಪರ್ಧೆಯಲ್ಲಿ ತನ್ವಿ ಜೆ ಪಿ ಎಂಟನೇ ತರಗತಿ ಪ್ರಥಮ ಸ್ಥಾನ, ಪ್ರತೀಕ್ಷಾ ಹತ್ತನೇ ತರಗತಿ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಕವನವಾಚನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಪ್ರಾಥಮಿಕ ವಿಭಾಗದ ಅಭಿನಯ ಗೀತೆ ಸ್ಪರ್ಧೆಯಲ್ಲಿ ಆದ್ಯ ವಿ ಜಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಪವರ್ ಮ್ಯಾನ್ ದಿ| ಸುಧಾಕರರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ, ಮನೆಯವರಿಗೆ ಸಾಂತ್ವನ

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya
error: Content is protected !!