23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ

ಕೊಯ್ಯೂರು ಕಸಬ ಉನ್ನತೀ ಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ದ್ವಿಭಾಷಾ ಮಾಧ್ಯಮದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಡೆಯಿತು.

ಉದ್ಘಾಟನೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಜಗನ್ನಾಥ ಮತ್ತು ಒಂದನೇ ತರಗತಿ ವಿದ್ಯಾರ್ಥಿಗಳು ಜಂಟಿಯಾಗಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುರುಷೋತ್ತಮ ಗೌಡ, ಗ್ರಾಮ ಪಂಚಾಯತ್ ಸದಸ್ಯ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಿರೀಶ್ ಆಚಾರ್ಯ, ಮರಿಯ ಹಾಗೂ ತಾಯoದಿರ ಸಮಿತಿ ಅಧ್ಯಕ್ಷೆ ಶ್ರೀಮತಿ ಜಯಂತಿ ಉಪಸ್ಥಿತರಿದ್ದರು. ಸಂಸ್ಥೆಯ ಪೋಷಕರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಆಂಗ್ಲ ಮಾಧ್ಯಮದ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸುವಂತೆ ಕೋರಲಾಯಿತು.

ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ಕನ್ನಡ, ಇಂಗ್ಲೀಷ್ ಎರಡೂ ಮಾಧ್ಯಮಗಳಲ್ಲೂ ಶಿಕ್ಷಣವನ್ನು ನೀಡುವುದರ ಬಗ್ಗೆ ಮಾಹಿತಿ ನೀಡಲಾಯಿತು. ಸಂಸ್ಥೆಯಲ್ಲಿ ಸರ್ಕಾರದಿಂದ ನೀಡಲ್ಪಟ್ಟ ಪ್ರಯೋಜನವನ್ನು ಪಡೆದುಕೊಂಡು ಸಂಸ್ಥೆಯ ಅಸ್ತಿತ್ವವನ್ನು ಕಾಪಾಡುವಂತೆ ಕರೆನೀಡಲಾಯಿತು. ವಿದ್ಯಾರ್ಥಿಗಳಾದ ನಿಶ್ಚಿತ, ಪ್ರಾರ್ಥನ, ವರ್ಷ, ಪ್ರಾರ್ಥನೆಗೈದರು. ಮುಖ್ಯ ಶಿಕ್ಷಕಿ ವಸಂತಿ ಕೆ. ಎನ್. ಸ್ವಾಗತಿಸಿ, ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ದೇವಿಬಾಯಿ ಡಿ. ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿಯರಾದ ಶ್ರೀಮತಿ ವಿಜಯಶ್ರೀ ಮತ್ತು ಶ್ರೀಮತಿ ವೇದಾವತಿ ಸಹಕರಿಸಿದರು.

Related posts

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

Suddi Udaya
error: Content is protected !!