23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೇಣೂರು ಪೊಲೀಸರಿಂದ ಆರೋಪಿ ಬಂಧನ

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಂದ್ರಪ್ರದೇಶ ಮೂಲದ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಜು.26 ರಿಂದ ನ.18 ರ ಸಮಯದಲ್ಲಿ ಬಲತ್ಕಾರದಿಂದ ಹಲವು ಭಾರಿ ಅತ್ಯಾಚಾರ ಮಾಡಿ ಎರಡು ತಿಂಗಳ ಗರ್ಭಿಣಿ ಮಾಡಿದ ಪ್ರಕರಣ ಸಂಬಂಧ ಅಪ್ರಾಪ್ತ ಬಾಲಕಿಯ ಸಂಬಂಧಿ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ‌‌.

ವೇಣೂರು ಪೊಲೀಸ್ ಠಾಣೆಯಲ್ಲಿ ನ.25 ರಂದು ಅಪ್ರಾಪ್ತ ಬಾಲಕಿ ನೀಡಿದ ದೂರಿನ ಮೇರೆಗೆ ಆರೋಪಿ ಅಮ್ಜತ್ ಖಾನ್(18) ವಿರುದ್ಧ ಕಲಂ 64 , BNS -2023 ಮತ್ತು 4,6 ಪೋಕ್ಸೋ ಕಾಯ್ದೆ 2012 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ‌.ಬಿ.ಎಸ್ ನೇತೃತ್ವದಲ್ಲಿ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಮತ್ತು ಸಬ್ ಇನ್ಸ್‌ಪೆಕ್ಟರ್ ಓಮನ ತಂಡ ಆರೋಪಿ ಅಮ್ಜತ್ ಖಾನ್ (18) ಎಂಬಾತನನ್ನು ನ.27 ರಂದು ಸಂಜೆ ವೇಣೂರು ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ. ಆರೋಪಿಯನ್ನು ನ.28 ರಂದು ಮಂಗಳೂರು ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!