25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

ಬೆಳ್ತಂಗಡಿ: ತಾಲೂಕಿನಲ್ಲಿ ಜನರ ಬಳಿ ಆಡಳಿತವನ್ನು ಕೊಂಡೊಯ್ದು ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗಿದ್ದು ನ.29ರಂದು ತಾಲೂಕಿನ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜ ಗ್ರಾಮ ಪಂಚಾಯತ್ ಸಭಾ ಭವನಗಳಲ್ಲಿ ಜರುಗಿತು.

ಜನರ ಸಮಸ್ಯೆಗಳಿಗೆ ಕಿವಿಕೊಡುವ ಕೆಲಸ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ನಡೆಯುತ್ತಿದೆ. ಗ್ರಾಮೀಣ ಮಟ್ಟದಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯ ಮಾಡುತ್ತಿದ್ದೇವೆ. ಇದುವರೆಗೆ 17 ಗ್ರಾಪಂ ಗಳಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಮುಂದಿನ ದಿನಗಳಲ್ಲಿ ಉಳಿದ ಪಂಚಾಯಿತಿಗಳಲ್ಲೂ ಮುಂದುವರೆಯಲಿದೆ” ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಹೆಚ್ಚಿನ ಗ್ರಾಮಸ್ಥರು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿವಿಧ ಇಲಾಖಾಧಿಕಾರಿಗಳಿಂದ ತಮಗೆ ಬೇಕಾದ ಮಾಹಿತಿ ಪಡೆದರು ಹಾಗೂ ಸಾರ್ವಜನಿಕ ಸಮಸ್ಯೆ ಮತ್ತು ವೈಯ್ಯಕ್ತಿಕ ಸಮಸ್ಯೆಗಳಿಗೆ ಸಂಬಂಧ ಪಟ್ಟಂತಹ ಮನವಿಗಳನ್ನು ಸ್ವೀಕರಿಸಲಾಯಿತು.

ತಹಶಿಲ್ದಾರ್ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya
error: Content is protected !!