24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಗಳ ಉದ್ಘಾಟನೆ

ಬೆಳ್ತಂಗಡಿ: ಸರಕಾರಿ ಅಂಗನವಾಡಿ ಕೇಂದ್ರ ಆರಂಭವಾಗಿ ರಾಜ್ಯದಲ್ಲಿ 50 ವರ್ಷದ ಸುವರ್ಣ ಮಹೋತ್ಸವ ಆಚರಣೆಯ ನೆನಪಿಗಾಗಿ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಅಂಗನವಾಡಿ ಶಿಕ್ಷಣ ಕಲಿಯುವಾಗಲೇ ಆಂಗ್ಲ ಮಾಧ್ಯಮ ಕಲಿಯಬೇಕೆಂಬ ಆಶಯದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಇರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಎಲ್.ಕೆ.ಜಿ ಯುಕೆಜಿ ತರಗತಿಗಳನ್ನು ಆರಂಭಿಸಲು ಬೆಂಗಳೂರಿನ ವಿಧಾನ ಸೌಧದಲ್ಲಿ ನ. 28 ರಂದು ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ನವರು ದೀಪ ಬೆಳಗಿಸಿ ಅಧಿಕೃತವಾಗಿ ಚಾಲನೆ ನೀಡುವ ಅದೇ ಸಮಯದಲ್ಲಿ ಏಕ ಕಾಲದಲ್ಲಿ ಬೆಳಿಗ್ಗೆ ಬೆಳ್ತಂಗಡಿ ನಗರದ ಮುಗುಳಿ ಅಂಗನವಾಡಿ ಕೇಂದ್ರದಲ್ಲೂ ಪ್ರಥಮ ಬಾರಿಗೆ ಎಲ್.ಕೆ.ಜಿ- ಯುಕೆಜಿ ತರತಿಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ತಹಶೀಲ್ದಾರ ಪೃಥ್ವಿ ಸಾನಿಕಂ ರವರು ದೀಪ ಪ್ರಜ್ವಲನೆ ಮಾಡಿ ಎಲ್.ಕೆ.ಜಿ- ಯುಕೆಜಿ ಪಠ್ಯ ಪುಸ್ತಕ ಬಿಡುಗಡೆಗೊಳಿಸಿ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ “ಸರಕಾರಿ ಶಾಲೆಯಲ್ಲಿ ಓದುವ ಬಡವರ ಮಕ್ಕಳು ಖಾಸಗಿ ಶಾಲೆಯಲ್ಲಿ ಓದುವ ಮಕ್ಕಳಂತೆ ಸರಿಸಮಾನವಾಗಿ ಕಲಿಯಬೇಕಾದರೆ ಪ್ರಾಥಮಿಕ ಮಟ್ಟದಲ್ಲಿಯೇ ಆಂಗ್ಲಮಾಧ್ಯಮ ಜ್ಞಾನದ ಅರಿವಿರಬೇಕು ಎಂಬ ಹಿನ್ನೆಲೆಯಲ್ಲಿ ಕರ್ನಾಟಕ ಘನ ಸರಕಾರವು ಅಂಗನವಾಡಿ ಕೇಂದ್ರದಲ್ಲಿಯೇ ಎಲ್.ಕೆ.ಜಿ- ಯುಕೆಜಿ ಆಂಗ್ಲ ಮಾಧ್ಯಮಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ಶಾಲೆಯ ಸ್ಥಳೀಯ ಜನರ ಮಕ್ಕಳನ್ನು ಸರಕಾರಿ ಅಂಗನವಾಡಿ ಕೇಂದ್ರಕ್ಕೆ ಕಳುಹಿಸಿ
ಸರಕಾರದ ಈ ಉಚಿತ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕರೆನೀಡಿದರು.

ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪಾರ್ವತಿ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಮೇಲ್ವಿಚಾರಕಿಯವರಾದ ಶ್ರೀಮತಿ ವಾಣಿಶ್ರೀ ಪ್ರಾಥಾವಿಕ ಮಾತುಗಳನ್ನಾಡಿ ಸರಕಾರದ ಕಾರ್ಯಕ್ರಮದ ಉದ್ದೇಶಗಳ ಬಗ್ಗೆ ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ನಗರ ಪಂಚಾಯತ್ ಮುಖ್ಯಾಧಿಕಾರಿಗಳಾದ ರಾಜೇಶ್ ಕೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶ್ರೀಮತಿ ಸವಿತಾ, ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ಇದರ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಬಿ.ಕೆ.ವಸಂತ್ ಬೆಳ್ತಂಗಡಿ, ಸ್ಥಳೀಯ ಮುಖಂಡರಾದ ಸನತ್ ಕುಮಾರ್ ಜೈನ್,
ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.

ಅಂಗನವಾಡಿ ಕೇಂದ್ರದ ಸಹಾಯಕಿ ಶ್ರೀಮತಿ ಭಾರತಿ , ಬಾಲ ವಿಕಾಸ ಸಮಿತಿಯ ಸದಸ್ಯರುಗಳಾದ ಶ್ರೀಮತಿ ಅಶ್ವಿನಿ, ಶ್ರೀಮತಿ ರೇಖಾ, ಶ್ರೀಮತಿ ಸವಿತಾ ಸಹಕರಿಸಿದರು.
ಅಂಗನವಾಡಿ ಮಕ್ಕಳ ಪೋಷಕರು, ಸ್ಥಳೀಯ ಮಖಂಡರು ಸಾರ್ವಜನಿಕರು ಭಾಗವಹಿಸಿದ್ದರು.

ಕಾರ್ಯಕ್ರಮದ ಮೊದಲು ಮುಗುಳಿ ಶಾಲೆಯ ಸ್ಕೌಟ್ ಗೈಡ್ ಮಕ್ಕಳ ಸಮವಸ್ತ್ರ ಧರಿಸಿ ಕಾರ್ಯಕ್ರಮದ ಗಣ್ಯರನ್ನು ಬ್ಯಾಂಡ್ ವಾಧ್ಯಗಳೊಂದಿಗೆ ಮೆರವಣಿಗೆಯಲ್ಲಿ ಕರೆತಂದು ಗೌರವ ಸಲ್ಲಿಸಿದರು .

ಮುಗುಳಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಶ್ರೀಮತಿ ಪದ್ಮಾವತಿ ಕಾರ್ಯಕ್ರಮ ಎಲ್ಲಾ ನಿರ್ವಹಣೆ ನೋಡಿಕೊಂಡು ಕಾರ್ಯಕ್ರಮದ ನಿರೂಪಣೆ ಮಾಡಿ ಗಣ್ಯರಿಗೆ ಸ್ವಾಗತಿಸಿ ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ರವರಿಗೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

Suddi Udaya
error: Content is protected !!