ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸರಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರಿನ 9ನೇ ತರಗತಿಯ ವಿದ್ಯಾರ್ಥಿನಿ ಧನುಶ್ರೀ ಎಸ್. ಕುಲಾಲ್ ಅವರಿಗೆ ಕರ್ನಾಟಕ ರಾಜ್ಯ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ರಾಜ್ಯಮಟ್ಟದಲ್ಲಿ ಎರಡು ಹಂತಗಳಲ್ಲಿ ಈ ಸ್ಪರ್ಧೆ ನಡೆಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜಿಲ್ಲಾ ಹಂತಗಳಿಂದ ಆಯ್ಕೆಯಾದ ಒಟ್ಟು 106 ಸ್ಪರ್ಧಾಳುಗಳಲ್ಲಿ ಮೊದಲ ಹಂತದಲ್ಲಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ಪ್ರತಿ ವಿಭಾಗದಿಂದ ಮೂರು ಸ್ಪರ್ಧಿಗಳನ್ನು ಆಯ್ಕೆ ಮಾಡಿ ನಂತರ ಅವರಿಗೆ ಎರಡನೇ ಹಂತದಲ್ಲಿ 12 ತೀರ್ಪುಗಾರರ ಸಮ್ಮುಖದಲ್ಲಿ ಅಂತಿಮ ಸ್ಪರ್ಧೆ ನಡೆದು ಧನುಶ್ರೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಕರ್ನಾಟಕ ಸರಕಾರದ ರಾಜ್ಯವಸ್ತು‌ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ನಡೆದ ಪ್ರೌಢಶಾಲಾ ವಿಭಾಗದ ದ.ಕ. ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಇವರು ಪ್ರಥಮ ಸ್ಥಾನ ಪಡೆದಿದ್ದರು.
ಇವರು ಬೆಳ್ತಂಗಡಿ ತಾಲೂಕಿನ ಪಿಲ್ಯದ ಶೈಲಜಾ ಮತ್ತು ಸತೀಶ್ ಬಂಗೇರ ದಂಪತಿಯ ಪುತ್ರಿ.

Related posts

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿವರಾಮ ಕಾರಂತರ ಸ್ಮರಣೆ

Suddi Udaya

ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಮತ್ತು ಸೇವಾಭಾರತಿಯಿಂದ 2025 ರ “ಸೇವಾ ಶ್ರೇಷ್ಠ” ಪುರಸ್ಕಾರ

Suddi Udaya

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya
error: Content is protected !!