September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಣಂದೂರು ಸ ಹಿ ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ

ಮಾಲಾಡಿ : ಸ ಹಿ ಪ್ರಾ ಶಾಲೆ ಸೋಣಂದೂರು ಇಲ್ಲಿ 2025- 26 ನೇ ಸಾಲಿನ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ.22 ರoದು ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳ ಸಹಕಾರದೊಂದಿಗೆ ಅದ್ದೂರಿಯಾಗಿ ನೆರವೇರಿತು.

ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ನಾಗೇಶ್ ಗೌಡ ವಹಿಸಿದ್ದರು. ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಲೆ ಊರಿನ ವಿದ್ಯಾ ದೇಗುಲ ಮಕ್ಕಳ ಭವಿಷ್ಯ ರೂಪಿಸುವ ಕಾರ್ಯ ನಮ್ಮೆಲ್ಲರ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಗಳಾಗಿ ಶಾಲಾ ಹಿರಿಯ ವಿದ್ಯಾರ್ಥಿ ಉದ್ಯಮಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಮಾತನಾಡಿ ಸರಕಾರಿ ಶಾಲೆಗಳಲ್ಲಿ ಮಕ್ಕಳು‌ ಉನ್ನತ ಮಟ್ಟದ ಸ್ಥಾನವನ್ನು ಗಳಿಸಬಹುದು ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಂಡು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸೆಲೆಸ್ಟಿನ್ ಡಿಸೋಜಾ , ಸದಸ್ಯರುಗಳಾದ ಎಸ್ ಬೇಬಿ ಸುವರ್ಣ, ರುಬಿನಾ ನವಾಜ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರೋಷನ್ ಲೋಬೋ ಮಹಮ್ಮಾಯಿ ಕಟ್ಟೇ ಫ್ರೆಂಡ್ಸ್ ಸೋಣಂದೂರು ಇದರ ಅಧ್ಯಕ್ಷರಾದ ಮೋಹನ್, ಶಿಕ್ಷಣ ಇಲಾಖೆಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರೀಮತಿ ತಾರಕೇಸರಿ, ಸಮೂಹ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಚೇತನ, ಡಯಟ್ ಉಪನ್ಯಾಸಕರಾದ ಸುರೇಶ್, ಸೋಣಂದೂರು ಅಂಗನವಾಡಿ ಕೇಂದ್ರದ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ರೂಪ, ಮುಖ್ಯ ಶಿಕ್ಷಕಿ ಶ್ರೀಮತಿ ಅನಿತಾ ರೇಷ್ಮಾ ಡಿಸೋಜ ಹಾಗೂ ಶಾಲಾನಾಯಕಿ ಕುಮಾರಿ ಆಯಿಷಾ ಅಝ್ಮಿಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಸುಮಾರು 26 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಶ್ರೀಮತಿ ತಾರಕೇಸರಿ ಹಾಗೂ ಹಿರಿಯ ವಿದ್ಯಾರ್ಥಿಯು, ಯಶಸ್ವಿ ಉದ್ಯಮಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಇವರಿಗೆ ಶಾಲಾ ವತಿಯಿಂದ ಗೌರವಯುತವಾಗಿ ಸನ್ಮಾನಿಸಲಾಯಿತು.

ಶಾಲಾ ಅಭಿವೃದ್ಧಿಗೆ ನಮ್ಮ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಶಾಲಾ ಶಿಕ್ಷಕರಾದ ಶ್ರೀಮತಿ ಅನಿತಾ ರೇಷ್ಮೆ ಡಿಸೋಜ, ಶ್ರೀಮತಿ ರಕ್ಷಾ ಬಿ, ಶ್ರೀಮತಿ ರಶ್ಮಿ ಎನ್. ಶ್ರೀಮತಿ ಸವಿತಾ. ಮತ್ತು ಅoಗನವಾಡಿ ಕಾರ್ಯಕರ್ತೆ ಶ್ರೀಮತಿ ಶಾoತಿ, ಇವರನ್ನು ಮಹಮ್ಮಾಯಿ ಕಟ್ಟೆ ಪ್ರೆoಡ್ಸ್ ವತಿಯಿಂದ ಸನ್ಮಾನಿಸಲಾಯಿತು. ಶಾಲಾ ಅಡುಗೆ ಸಿಬ್ಬಂದಿ ಹಾಗೂ ಅಂಗನವಾಡಿ ಸಹಾಯಕಿಯವರನ್ನು ಗೌರವಿಸಲಾಯಿತು.

ಕಲಿಕೆ ಪಠ್ಯ ಸಹಪಠ್ಯ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಸ್ವತ್ತು ಪಾಲನೆ ಆಟೊಟ ಸಹಪಠ್ಯ ಎಲ್ಲದರಲ್ಲೂ ಮುಂಚೂಣಿಯಲ್ಲಿದ್ದ ಮೂವರು ವಿದ್ಯಾರ್ಥಿಗಳಿಗೆ 2025 26ನೇ ಸಮಗ್ರ ಪ್ರಶಸ್ತಿ ನೀಡಲಾಯಿತು ಹಾಗೂ ಮಕ್ಕಳ ಹಬ್ಬದ ಪ್ರಯುಕ್ತ ಪೋಷಕರಿಗೂ ಸ್ಪರ್ಧೆಗಳನ್ನು ಏರ್ಪಡಿಸಿದ್ದು ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಶ್ರೀಮತಿ ರಕ್ಷಾ ಕಾರ್ಯಕ್ರಮ ನಿರೂಪಣೆ ಮಾಡಿದರು. ಶ್ರೀಮತಿ ಅನಿತಾ ರೇಷ್ಮಾ ಸ್ವಾಗತಿಸಿ, ಶ್ರೀಮತಿ ರಶ್ಮಿ ವಂದಿಸಿದರು. ಸಾoಸ್ಕ್ರತಿಕ ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ರಶ್ಮಿ ಹಾಗೂ ಶ್ರೀಮತಿ ಸವಿತಾ ನಡೆಸಿದರು.

Related posts

ತೋಟಗಾರಿಕೆಯಲ್ಲಿ ವಿವಿಧ ಸಸಿಗಳು ಲಭ್ಯ

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಹೊಸದಿಲ್ಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಹೊಸಂಗಡಿಯ ಎಲ್.ಸಿ.ಆರ್.ಪಿ. ಸೌಮ್ಯ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!