ಬೆಳ್ತಂಗಡಿ: ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಭೇಟಿಯಾಗಿ ಸ್ವಾಗತಿಸಿದರು.

ಇಂತಹ ಸಾಮಾನ್ಯ ಕಾರ್ಯಕರ್ತನಿಗೆ ಎಂದು ಮರೆಯಲಾಗದ ಈ ಅದ್ಬುತ ಸುವರ್ಣ ಅವಕಾಶ ನೀಡಿದ ಬಿಜೆಪಿ ಪಕ್ಷದ ಪ್ರಮುಖರಿಗೆ ಹಾಗೂ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಉಮೇಶ್ ಕುಲಾಲ್ ಕೃತಜ್ಞತೆ ಸಲ್ಲಿಸಿದರು.











