September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆಗಾಗಿ ಡಿ. 03 ರಂದು ಮಂಗಳೂರಿನ ಕೋಣಾಜೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಯುವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಬೆಳ್ತಂಗಡಿಯ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನಿಂದ ಅತಿ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಧ್ಯಕ್ಷ ಜಯ ವಿಕ್ರಂ ಕಲ್ಲಾಪು ಮನವಿ ಮಾಡಿದರು. ಇದೊಂದು ಐತಿಹಾಸಿಕ ಸಮಾರಂಭ ಸಮಾಜದ ಪ್ರತಿಯೊಬ್ಬರು ಸಮಾಜದ ಹಬ್ಬವೆಂದು ಪರಿಗಣಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಮಾಜಿ ಅಧ್ಯಕ್ಷ ಪೀತಾಂಬರ ಹೇರಾಜೆಯವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಸುಜಿತ ವಿ ಬಂಗೇರ, ಮಾಜಿ ಅಧ್ಯಕ್ಷ ಜಯರಾಮ್ ಬಂಗೇರ, ಚಿದಾನಂದ ಎಲ್ದಕ್ಕ, ಉಪಾಧ್ಯಕ್ಷ ಸುಂದರ ಪೂಜಾರಿ, ಮಹಿಳಾ ಸಂಘದ ಅಧ್ಯಕ್ಷ ಸುಮಾ ಪ್ರಮೋದ್, ಕಾರ್ಯದರ್ಶಿ ನಿತೇಶ್ ಕುಮಾರ್ ವೇಣೂರು, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಮ್ ಕೆ ಪ್ರಸಾದ್, ಯುವ ವಾಹಿನಿ ಅಧ್ಯಕ್ಷ ಗುರು ರಾಜ್ ಗುರಿಪಳ್ಳ, ಹಾಗೂ ಇತರ ಗಣ್ಯರು ಹಾಜರಿದ್ದರು.

Related posts

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya

ಮರುಮೌಲ್ಯಮಾಪನ ಫಲಿತಾಂಶ: ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜು ತಾಲೂಕಿನಲ್ಲಿ ಪ್ರಥಮ

Suddi Udaya

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya

80ನೇ ಸ್ವಾತಂತ್ರ್ಯೋತ್ಸವದಲ್ಲಿ ಕಂಗೊಳಿಸಿದ ಬ್ರೈಟ್ ಹೊರೈಝನ್

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!