September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ:7ರಂದು ಬೆಳ್ತಂಗಡಿಯಲ್ಲಿ 12ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆಯ ಸಹಕಾರದೊಂದಿಗೆ ಡಿ.7 ರಂದು ದಿ.ಕೆ.ವಸಂತ ಬಂಗೇರ ಸಭಾ ವೇದಿಕೆ ಜೂನಿಯರ್ ಕಾಲೇಜು ಮೈದಾನ, ಬೆಳ್ತಂಗಡಿ ಇಲ್ಲಿ 12ನೇ ವರ್ಷದ ಕೋಟಿ-ಚೆನ್ನಯ ಕ್ರೀಡಾಕೂಟ ನಡೆಯಲಿದೆ ಎಂದು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿದರು.

ಅವರು ಡಿ 1ರಂದು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಬೆಳಿಗ್ಗೆ ಗಂಟೆ 7.30ಕ್ಕೆ ಗುರುಪೂಜೆ ಬೆಳಿಗ್ಗೆ ಗಂಟೆ 8.00ಕ್ಕೆ: ಬಿಲ್ಲವ ಮಹಿಳಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಸುಜಿತಾ ವಿ. ಬಂಗೇರರವರು ಕ್ರೀಡಾ ಜ್ಯೋತಿ ಹಸ್ತಾಂತರ ಮಾಡಲಿದ್ದಾರೆ, ಬೆಳಿಗ್ಗೆ ಗಂಟೆ 8.10ಕ್ಕೆ ಕ್ರೀಡಾ ಜ್ಯೋತಿಯೊಂದಿಗೆ ವಾಹನ ಜಾಥಾಕ್ಕೆ ಚಾಲನೆ ಶ್ರೀ ಗುರುನಾರಾಯಣ ಸ್ವಾಮಿ ಸಂಘ ನಿಕಟಪೂರ್ವ ಅಧ್ಯಕ್ಷರಾದ ಚಿದಾನಂದ ಪೂಜಾರಿ ಎಲ್ದಕ್ಕ ನೀಡಲಿದ್ದಾರೆ. ಮೆರವಣಿಗೆಯಲ್ಲಿ ಕ್ರೀಡಾ ಅಂತರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ವಿಶ್ವಕಪ್ ಮಹಿಳಾ ಕಬಡ್ಡಿ ವಿಜೇತ ತಂಡದ ಧನಲಕ್ಷ್ಮೀ ಪೂಜಾರಿಯವರು ಭಾಗವಹಿಸಲಿದ್ದಾರೆ. ಜೊತೆಗೆ ವಿಶೇಷ ಆಕರ್ಷನೆಯಾಗಿ ಅವಳಿ-ಜವಳಿ ಸಹೋದರ-ಸಹೋದರಿಯರು ಭಾಗವಹಿಸಲಿದ್ದಾರೆ ಎಂದರು.

ಬೆಳಿಗ್ಗೆ ಗಂಟೆ 9.30ಕ್ಕೆ ಧ್ವಜಾರೋಹಣವನ್ನು ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್ ರವರು ನಡೆಸಲಿದ್ದಾರೆ. ಬೆಳಿಗ್ಗೆ ಗಂಟೆ 9.35ರಿಂದ: ಪಥ ಸಂಚಲನ ಚಾಲನೆಯನ್ನು ಶ್ರೀ ಗುರುನಾರಾಯಣ ಸ್ವಾಮಿ ಸಂಘ ಬೆಳ್ತಂಗಡಿ ಇಲ್ಲಿನ ಮಾಜಿ ಅಧ್ಯಕ್ಷರಾದ ಪಿ.ಕೆ ರಾಜು ಪೂಜಾರಿ ಕಾಶಿಪಟ್ಣ ರವರು ನಡೆಸಲಿದ್ದಾರೆ.

ಬೆಳಿಗ್ಗೆ ಗಂಟೆ 10.00ರಿಂದ ಉದ್ಘಾಟನಾ ಕಾರ್ಯಕ್ರಮ ದಿ| ಕೆ. ವಸಂತ ಬಂಗೇರ ಸಭಾ ವೇದಿಕೆಯಲ್ಲಿ ನಡೆಯಲಿದೆ.ಬೆಸ್ಟ್ ಪೌಂಡೆಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂರವರು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಉಮಾನಾಥ್ ಕೋಟ್ಯಾನ್, ಅಖಿಲ ಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷರಾದ ನವೀನ್ ಚಂದ್ರ ಡಿ.ಸುವರ್ಣ, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿ ಹಾಗೂ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಸೂರ್ಯಕಾಂತ್ ಜೆ.ಸುವರ್ಣ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ.

ಅಪರಾಹ್ನ 2 ಗಂಟೆಗೆ ಸಭಾ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮೆಸ್ಕಾಂ ಮಂಗಳೂರು ಅಧ್ಯಕ್ಷರಾಗಿ ಹರೀಶ್ ಕುಮಾರ್ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ ಪ್ರತಿಭಾ ಕುಳಾಯಿ, ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ.

ಸಂಜೆ ಸಮಯ 6 ಗಂಟೆಗೆ ಸಮಾರೂಪ ಸಮಾರಂಭ ನಡೆಯಲಿದೆ. ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಮಂಗಳೂರಿನ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ ಮತ್ತು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಹಾಗೂ ಶ್ರೀ ಗುರುದೇವ ಕಾಲೇಜು ಬೆಳ್ತಂಗಡಿ ಇದರ ಅಧ್ಯಕ್ಷರಾದ ಪ್ರೀತಿತಾ ಧರ್ಮ ವಿಜೇತ್ ಮತ್ತು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಕ್ರೀಡಾಕೂಟದಲ್ಲಿ ಬಿಲ್ಲವ ಸಮಾಜದ ಬಂಧುಗಳಿಗೆ ಮಾತ್ರ ಅವಕಾಶವಿದ್ದು, ಸುಮಾರು ಐದು ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ.ಪುರುಷರಿಗೆ,ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ.ಕ್ರೀಡಾಕೂಟದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಂಘಕ್ಕೆ ಪದ್ಮನಾಭ ಮಾಣಿಂಜ ಹೆಸರಲ್ಲಿ ಸಮಗ್ರ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ರಾಜ್ಯ,ರಾಷ್ಟ್ರ,ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ತಿಳಿಸಿದರು.

ವಧು-ವರರ ಅನ್ವೇಷಣೆ ಕಾರ್ಯಕ್ರಮ

ಬೆಳಿಗ್ಗೆ 10.00ಗಂಟೆಗೆ ಕ್ರೀಡಾಕೂಟದ ಕ್ರೀಡಾಂಗಣದಲ್ಲಿ ಬಿಲ್ಲವ ಮಹಿಳಾ ವೇದಿಕೆ ವತಿಯಿಂದ “ವಧು-ವರರ ಅನ್ವೇಷಣೆ ಕಾರ್ಯಕ್ರಮ” ಜರಗಲಿದೆ.

ಡಿ. 3 ರಂದು ಮಂಗಳೂರು ಮಂಗಳ ಗಂಗೋತ್ರಿ ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದೇವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ಬೆಲ್ ಗಂಗ,ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್,ಕ್ರೀಡಾ ನಿರ್ದೇಶಕ ತರುಷ್ ಜೆ ಹೇರಾಜೆ, ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು,ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಪ್ರಸಾದ್ ಎಂ.ಕೆ, ಕ್ರೀಡಾ ಕಾರ್ಯದರ್ಶಿ ದೇವಿ ಪ್ರಸಾದ್ ಬರಮೇಲು, ನಿರ್ದೇಶಕರಾದ ರೂಪೇಶ್ ಧರ್ಮಸ್ಥಳ, ಚಂದ್ರಶೇಖರ ಇಂದಬೆಟ್ಟು, ಸುನಿಲ್ ಕನ್ಯಾಡಿ ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya
error: Content is protected !!