23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ: ಸಂಕೀರ್ಣ ಬಾಯಿ ಕ್ಯಾನ್ಸರ್‌ಗೆ ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರ ಚಿಕಿತ್ಸೆ

ಉಜಿರೆ: ಬಾಯಿಯ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ರೋಗಿಯೊಬ್ಬರಿಗೆ ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಮಿ-ಮಂಡಿಬುಲೆಕ್ಟಮಿ ಶಸ್ತçಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.
43 ವರ್ಷ ಪ್ರಾಯದ ರೋಗಿಯೊಬ್ಬರು 6 ತಿಂಗಳಿನಿಂದ ಬಲ ಕೆಳತುಟಿಯ ಭಾಗದಲ್ಲಿ ನೋವು ಮತ್ತು ಊತದಿಂದ ಬಳಲುತ್ತಿದ್ದು, ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಇಲ್ಲಿನ ಕಿವಿ, ಮೂಗು, ಗಂಟಲು ತಜ್ಞರಾದ ಡಾ| ರೋಹನ್ ದೀಕ್ಷಿತ್ ರೋಗಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಬಲಕೆನ್ನೆಯಲ್ಲಿ ಗಾಯವಿದ್ದು, ಇದು ಕೆಳತುಟಿಯವರೆಗೆ ವಿಸ್ತರಿಸಿರುವುದು ಕಂಡು ಬಂದಿತ್ತು. ರೋಗಿಯನ್ನು ಇನ್ನೂ ಹೆಚ್ಚಿನ ತಪಾಸಣೆಗೆ ಒಳಪಡಿಸಿದಾಗ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ರೋಗಿ ಮತ್ತು ಸಂಬಂಧಿಕರಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯತೆ ಮತ್ತು ಮುಂದಿನ ಚಿಕಿತ್ಸೆಯ ಬಗ್ಗೆ ವಿವರಿಸಿದ ಬಳಿಕ ಕಿವಿ-ಮೂಗು-ಗಂಟಲು ತಜ್ಞ ತಲೆ ಮತ್ತು ಕುತ್ತಿಗೆಯ ಆಂಕೊಸರ್ಜನ್ ಆಗಿರುವ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಡಾ| ರೋಹನ್ ದೀಕ್ಷಿತ್, ಪ್ಲಾಸ್ಟಿಕ್ ಮತ್ತು ಪುನರ್ ನಿರ್ಮಾಣ ಶಸ್ತçಚಿಕಿತ್ಸಕ ಡಾ| ಕೃಷ್ಣ ಪ್ರಸಾದ್ ಶೆಟ್ಟಿ ಮತ್ತು ಅರೆವಳಿಕೆ ತಜ್ಞ ಡಾ| ಸುಪ್ರೀತ್ ಆರ್. ಶೆಟ್ಟಿ ದಾದಿಯರಾದ ನಯನ, ಶ್ವೇತಲ್, ಅನು, ಮಹಾಲಕ್ಷಿö್ಮ, ಜಾಸ್ಮಿನ್ ಮತ್ತು ಅರೆವಳಿಕೆ ಟೆಕ್ನಿಷಿಯನ್‌ಗಳಾದ ಮೇಘಾ, ರಮ್ಯಾ ತಂಡ ಆ.೨೨ ರಂದು ಈ ಯಶಸ್ವಿ ಶಸ್ತ್ರ ಚಿಕಿತ್ಸೆಯನ್ನು ನಡೆಸಿದರು.

ಏನಿದು ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರ ಚಿಕಿತ್ಸೆ ? :ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರ ಚಿಕಿತ್ಸೆ ಎನ್ನುವುದು ಒಂದು ಶಸ್ತ್ರ ಚಿಕಿತ್ಸಾ ವಿಧಾನವಾಗಿದೆ. ಇದು ಸಾಮಾನ್ಯವಾಗಿ ಗೆಡ್ಡೆಗಳಿಂದ, ತೀವ್ರವಾದ ಮೂಳೆ ಸೋಂಕುಗಳಿಂದ, ಅಪಘಾತ ಮತ್ತು ಬಾಯಿಯ ಕ್ಯಾನ್ಸರ್‌ನಿಂದಾಗಿ ಕೆಳದವಡೆಗೆ ತೊಂದರೆ ಉಂಟಾದಾಗ ಹೆಮಿ-ಮಂಡಿಬುಲೆಕ್ಟಮಿ ಶಸ್ತçಚಿಕಿತ್ಸಾ ವಿಧಾನದಿಂದ ಕೆಳದವಡೆಯ ಒಂದು ಬದಿಯನ್ನು ತೆಗೆದು ಹಾಕಲಾಗುತ್ತದೆ. ಇದೇ ಶಸ್ತ್ರ ಚಿಕಿತ್ಸಾ ವಿಧಾನದಿಂದ ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಸ್ತçಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.


ಡಾ| ಡಿ. ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರು ರೋಗಿ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದರು. ಪ್ರಸ್ತುತ ರೋಗಿಯ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ರೋಗಿ ಮತ್ತು ಸಂಬಂಧಿಕರಲ್ಲಿ ಸಂತಸ ತಂದಿದೆ. ಈಗಾಗಲೇ ಅತ್ಯಂತ ಸಂಕೀರ್ಣವಾದ ಬಾಯಿಯ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆ ಮಾಡುವಲ್ಲಿ ನಮ್ಮ ಆಸ್ಪತ್ರೆ ಯಶಸ್ವಿಯಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ತಿಳಿಸಿದರು.

Related posts

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya

ಬೆಳಾಲು: ಪೆರಿಯಡ್ಕ ಶಾಲಾ ರಜತ ಮಹೋತ್ಸವ: ಪ್ರವೇಶ ದ್ವಾರ ಲೋಕಾರ್ಪಣೆ- ಸಭಾ ಕಾರ್ಯಕ್ರಮ

Suddi Udaya

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!