March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

ಲಾಯಿಲ: ಇಂದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಮುಖ್ಯವಾಗಿದೆ. ಕಂಪ್ಯೂಟರ್ ಶಿಕ್ಷಣ ಎಂದರೆ ಒಂದು ಕೌಶಲ್ಯ. ಪ್ರಸ್ತುತ ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಕೌಶಲ್ಯವೂ ಮುಖ್ಯ. ಆವಾಗ ಉತ್ತಮ ಉದ್ಯೋಗದ ಕನಸನ್ನು ನನಸು ಮಾಡಿಕೊಳ್ಳಬಹುದು. ಇಲ್ಲಿಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ತರಬೇತಿಯನ್ನು ಆಯೋಜಿಸಲಾಗುತ್ತಿದೆ ಎಂದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಲಾಯಿಲ ತರಬೇತಿ ಕೇಂದ್ರದ ಪ್ರಾಂಶುಪಾಲ ರಮೇಶ್ ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಛೇರಿ ಪ್ರಬಂಧಕ ಅಣ್ಣು ಗೌಡ ಉಪಸ್ಥಿತರಿದ್ದರು.
ಕಂಪ್ಯೂಟರ್ ತರಬೇತಿಯು ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಯೋಜನೆಯಡಿ ನೋಂದಾಯಿತವಾಗಿದ್ದು, ಕೌಶಲ್ಯ ಯೋಜನೆಯಡಿ ಪ್ರಮಾಣೀಕೃತ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ ವಿತರಿಸಲಾಯಿತು. ಒಟ್ಟು 25 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆದುಕೊಂಡಿರುತ್ತಾರೆ. ಕಾರ್ಯಕ್ರಮವನ್ನು ಕಂಪ್ಯೂಟರ್ ತರಬೇತುದಾರರು ಜಯಶ್ರೀ ನಿರ್ವಹಣೆ ಮಾಡಿ, ಧನ್ಯವಾದ ನೀಡಿದರು.

Related posts

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ – 10 ದಿನಗಳ ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya
error: Content is protected !!