22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಶ್ವ ಏಡ್ಸ್ ದಿನ : ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಎಸ್ ಡಿ ಎಮ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಎನ್ ಎಸ್ ಎಸ್ ಘಟಕದ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಉಪನ್ಯಾಸ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಮತ್ತು ವೈದ್ಯಕೀಯ ಅಧೀಕ್ಷಕಿಯಾದ ಡಾ. ಪ್ರಕೃತಿ ರವರು ಎಚ್ಐವಿ ಸೋಂಕಿನ ಲಕ್ಷಣಗಳು, ತಡೆಗಟ್ಟುವ ಕ್ರಮಗಳು,, ಸುರಕ್ಷಾ ಕ್ರಮಗಳು, ಸೋಂಕಿನ ತಡೆಗಟ್ಟುವಿಕೆಗೆ ಸರಕಾರದ ಯೋಜನೆಗಳು ಮುಂತಾದ ವಿಷಯದ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಬಗ್ಗೆ ಉಪನ್ಯಾಸ ನೀಡಿದರು. ಕಾಲೇಜಿನ ಉಪಪ್ರಾಂಶುಪಾಲರಾದ ರಾಜೇಶ್ ಬಿ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹಯೋಜನಾಧಿಕಾರಿ ಶೋಭಾ ಪಿ, ಎನ್ಎಸ್ಎಸ್ ನಾಯಕ ಸಂಕೇತ್, ನಾಯಕಿ ರಾಶಿಕ ಉಪಸ್ಥಿತರಿದ್ದರು.
ಸ್ವಯಂ ಸೇವಕಿ ಸುಪೇಕ್ಷಾ ಸ್ವಾಗತಿಸಿ, ಪಲ್ಲವಿ ವಂದಿಸಿದರು. ಧನ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

Suddi Udaya
error: Content is protected !!