September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ಭಾಸ್ಕರಾಭಿನಂದನ ಕಾರ್ಯಕ್ರಮ, ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಸಹಕಾರ, ಕಂಬಳ, ಕೃಷಿ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡಿದ ಕರಾವಳಿಯ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ರಾಜ್ಯ ಸರಕಾರ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಸಹಕಾರಿ ರಂಗದ ಅಪಾರ ಸೇವೆಯನ್ನು ಗುರುತಿಸಿ ಪ್ರಶ್ತಸಿ ನೀಡಲಾಗಿದೆ. ಪ್ರಶಸ್ತಿ ಪುರಸ್ಕೃತಗೊಂಡ ಅವರಿಗೆ ನಾಗರಿಕ ಪೌರ ಸನ್ಮಾನದ ಭಾಸ್ಕರಾಭಿನಂದನ ಕಾರ್ಯಕ್ರಮ ಡಿ.6 ರಂದು ಅಪರಾಹ್ನ 3 ಗಂಟೆಗೆ ಮಂಗಳೂರು ಪುರಭವನ (ಟೌನ್ ಹಾಲ್)ನಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜರವರು ಬಿಡುಗಡೆಗೊಳಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಉದ್ಯಮಿ ಯೋಗೀಶ್ ಪೂಜಾರಿ ಕಡ್ತಿಲ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ, ಪ್ರಮುಖರಾದ ವಿಷ್ಣು ಸಂಪಿಗೆತ್ತಾಯ, ಸಂತೋಷ್ ಕುಮಾರ್ ಹೆಗ್ಡೆ ತೆಂಕಕಾರಂದೂರು, ಶ್ರೀನಿವಾಸ್ ಕಾರಂದೂರು, ಸಂತೋಷ್ ಪಿ ಕೋಟ್ಯಾನ್ ಬಳಂಜ, ಹೇಮಂತ್ ಕಟ್ಟೆ, ವಿದ್ಯಾನಂದ ಕಟ್ಟೆ, ಶರತ್ ಕುಮಾರ್ ತೆಂಕಕಾರಂದೂರು, ಪ್ರದೀಪ್ ಕಾಪಿನಡ್ಕ ಉಪಸ್ಥಿತರಿದ್ದರು.

Related posts

ಜ.11: “ಆಸರೆ” ಸ್ಕಾಲರ್ ಶಿಪ್ ಪರೀಕ್ಷೆ , ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅವಕಾಶ : ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಪಿಯುಸಿ ಶಿಕ್ಷಣಕ್ಕೆ ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಉಚಿತ ದಾಖಲಾತಿ

Suddi Udaya

ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಗೂಡಿನಿಂದ ಕೋಳಿಗಳನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಪಣಕಜೆ ಸಬರಬೈಲು ಅಂಗನವಾಡಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

Suddi Udaya

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya
error: Content is protected !!