25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಊರಿನ ಹಿರಿಯರು, ಶಾಲಾ ಹಿರಿಯ ವಿದ್ಯಾರ್ಥಿ ನಿವೃತ್ತ ಶಿಕ್ಷಣ ಸಹಾಯಕರಾದ ಬಾಬು ಗೌಡ ಬಾಜಿಮಾರು ಬಿಡುಗಡೆ ಮಾಡಿ ಶುಭ ಹಾರೈಸಿದರು.

ಡಿಸೆಂಬರ್ 21 ಮತ್ತು 22 ರಂದು ಬದನಾಜೆ ಶಾಲಾ ಅಮೃತ ಮಹೋತ್ಸವ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳು ಊರಿನ ವಿದ್ಯಾಭಿಮಾನಿಗಳ ನೆರವಿನಿಂದ ನಿರ್ಮಾಣ ಮಾಡಿದ ‘ಸುಜ್ಞಾನ ಸಭಾಂಗಣ’ ದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಶಾಸಕರು, ಸಂಸದರು ಸೇರಿದಂತೆ ವಿವಿಧ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ವಿಶೇಷವಾಗಿ ಶಾಲಾ ಮಕ್ಕಳಿಂದ ಯಕ್ಷಗಾನ, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆ ಉಜಿರೆಯ ವಿದ್ಯಾರ್ಥಿಗಳಿಂದ ‘ಎಸ್.ಡಿ.ಎಂ.ಕಲಾ ವೈಭವ’ ಮತ್ತು ಸಮಾರೋಪ ಸಮಾರಂಭದ ನಂತರದಲ್ಲಿ ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ ಬೋಳಾರ್ ಅಭಿನಯದ ‘ಆಂಟಿ ಬೊಕ್ಕ ಅಂಕಲ್’ ಎಂಬ ತುಳು ಹಾಸ್ಯ ಮಯ ನಾಟಕ ಪ್ರದರ್ಶನ ಗೊಳ್ಳಲಿದ್ದು, ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲು ತಯಾರಿಗಳು ನಡೆಯುತ್ತಿದೆ. ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರಿನ ವಿದ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya
error: Content is protected !!