September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಭೀಕರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಸಾರ್ವಜನಿಕ ಸಂಪರ್ಕ ರಸ್ತೆಗಳು, ಸೇತುವೆಗಳು, ಕಾಲು ಸಂಕಗಳು, ವಿದ್ಯುತ್ ಸಂಪರ್ಕಗಳು, ಶಾಲಾ ಕಟ್ಟಡಗಳು , ಅಂಗನವಾಡಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳು ಮತ್ತು ಜಮೀನುಗಳು ತೀರಾ ಅಪಾಯದ ಮಟ್ಟದಲ್ಲಿದ್ದು ನೀರಿನ ಸೆಳೆತಕ್ಕೆ ಕೊಚ್ಚಿ/ಕುಸಿತಕ್ಕೊಳಗಾಗುವ ಸಾಧ್ಯತೆ ಇರುವುದರಿಂದ ಆ ಭಾಗದಲ್ಲಿ ಅಗತ್ಯವಾಗಿ ತಡೆಗೋಡೆ ಕಾಮಗಾರಿಗಳನ್ನು ಕೈಗೊಳ್ಳಲು ಹಾಗೂ ಸೇತುವೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಶಾಸಕರು 31.07.2025ರಂದು ಸರಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿಗಳಿಗೆ ಮನವಿಯನ್ನು ನೀಡಿದ್ದು ಸದ್ರಿ ಮನವಿಗೆ ಸ್ಪಂದಿಸಿದ ರಾಜ್ಯ ಸರಕಾರ ರೂ.10.67 ಕೋಟಿ ಅನುದಾನವನ್ನು ಮಂಜೂರುಗೊಳಿಸಿರುತ್ತದೆ.

ಈ ಸಂದರ್ಭದಲ್ಲಿ ಅನುದಾನವನ್ನು ಮಂಜೂರುಗೊಳಿಸಿದ ರಾಜ್ಯ ಸರಕಾರಕ್ಕೆ ಶಾಸಕ ಹರೀಶ್ ಪೂಂಜರವರು ತಾಲೂಕಿನ ಜನತೆಯ ಪರವಾಗಿ ಧನ್ಯವಾದಗಳನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya
error: Content is protected !!