September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.4 ರಂದು ಪ್ರೌಢಶಾಲಾ ಬಾಲಕಿಯರಿಗೆ “ಬ್ಲೂಮಿಂಗ್ ಇಂಟು ಟೀನ್ಸ್ (Blooming into Teens)” ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಇಕೋ ಹಬ್ ನ ಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೈಶಾಖ ಕುಲಕರ್ಣಿ ಇವರು ಪ್ರೌಢಾವಸ್ಥೆಯಲ್ಲಿ ಬಾಲಕಿಯರು ತಿಳಿದಿರಬೇಕಾದ ಮಾನಸಿಕ, ಭಾವನಾತ್ಮಕ, ದೈಹಿಕ ಹಾಗೂ ಆಹಾರ ಪದ್ಧತಿಯ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಉಜಿರೆ ಎಸ್.ಡಿ.ಎಮ್ ಐ.ಟಿ ಕಾಲೇಜಿನ ಮುಖ್ಯ ಗ್ರಂಥಪಾಲಕರಾದ ಡಾ. ರಜತಾ. ಪಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಸವಿತಾ ವೇದಪ್ರಕಾಶ್ ನಿರೂಪಿಸಿ ಶಾಲಾ ಪ್ರಾಂಶುಪಾಲರಾದ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಮಾ.4: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ “ಕೋಟಿ- ಚೆನ್ನಯ” ಯಕ್ಷಗಾನ

Suddi Udaya

ಕೃಷಿ ತೋಟಗಳಿಗೆ ಹಾನಿ ಮಾಡುವ ಕಾಡಾನೆಗಳ ತಡೆಗೆ ಅರಣ್ಯ ಇಲಾಖೆಯಿಂದ ಜೋತಾಡುವ ಸೌರ ವಿದ್ಯುತ್ ಬೇಲಿ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಬೆಳ್ತಂಗಡಿ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕೊಕ್ಕಡ ಗ್ರಾಮ ಸಮಿತಿ ಸಭೆ, ನೂತನ ಸಮಿತಿ ರಚನೆ

Suddi Udaya

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!