32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

ಬೆಳ್ತಂಗಡಿ : ಆಡಳಿತ ಮತ್ತು ಅಭಿವೃದ್ಧಿ ವಿಷಯದಲ್ಲಿ ಉತ್ತಮ ಸಾಧನೆ ಮಾಡಿದ ಗ್ರಾಮ ಪಂಚಾಯತ್‌ಗಳಿಗೆ ಗಾಂಧಿ ಜಯಂತಿಯಂದು ನೀಡಲ್ಪಡುವ ಗಾಂಧೀ ಗ್ರಾಮ ಪುರಸ್ಕಾರದ 2023-24ನೇ ಸಾಲಿಗೆ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ಪಂಚಾಯತ್ ಸೇರಿದಂತೆ ರಾಜ್ಯದ 238 ಗ್ರಾ.ಪಂ. ಗಳು ಆಯ್ಕೆಯಾಗಿದ್ದವು. ಪ್ರಶಸ್ತಿ ಘೋಷಣೆಯಾಗಿ ಎರಡು ವರ್ಷ ಕಳೆದರೂ ಪ್ರಶಸ್ತಿ ಪ್ರದಾನವಾಗಿರಲಿಲ್ಲ. ಆದರೆ ಪ್ರಶಸ್ತಿಯ ಮೊತ್ತವಾಗಿ ರೂ.5 ಲಕ್ಷ ವಿಶೇಷ ಅನುದಾನ ಪಂಚಾಯತ್ ಗಳಿಗೆ ಲಭಿಸಿತ್ತು. ಇದೀಗ ಕೊನೆಗೂ ಪ್ರಶಸ್ತಿ ಪ್ರದಾನವಾಗಿದೆ.

ಬೆಂಗಳೂರು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಡಿ.1ರಂದು ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿದ್ದರು. ಕಾಶಿಪಟ್ಣ ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಸತೀಶ್. ಕೆ ಕಾಶಿಪಟ್ಣ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಟೇಲ್ ಪ್ರಶಸ್ತಿ ಸ್ವೀಕರಿಸಿದರು.

Related posts

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya
error: Content is protected !!