23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಿವ್ಯಾಂಗರ ಆಶಾಕಿರಣ ಕನ್ಯಾಡಿ ಸೇವಾ ಭಾರತಿಯ ನೂತನ ಕಾರ್ಯಾಲಯ ‘ಸೇವಾನಿಕೇತನ’ ಉದ್ಭಾಟನೆ

ಕನ್ಯಾಡಿ: ಬೆನ್ನುಹುರಿ ಅಪಘಾತಕ್ಕೋಳಗಾದ ಸಾವಿರಾರು ಮಂದಿ ದಿವ್ಯಾಂಗರಿಗೆ ಆಶ್ರಯ ತಾಣವಾಗಿರುವ ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ ಎಂ.ಆರ್.ಪಿ.ಎಲ್. ಸಿ.ಎಸ್.ಆರ್. ಅನುದಾನದಲ್ಲಿ ನಿರ್ಮಾಣವಾಗಿರುವ ನೂತನ ಕಾರ್ಯಾಲಯ ‘ಸೇವಾನಿಕೇತನ’ ಇದರ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ ಸೇವಾ ಭಾರತಿಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಅವರ ನೇತೃತ್ವದಲ್ಲಿ ಧರ್ಮಸ್ಥಳ ಕನ್ಯಾಡಿಯ ಸೇವಾನಿಕೇತನದಲ್ಲಿ ಡಿ.4ರಂದು ಅದ್ದೂರಿಯಾಗಿ ಜರಗಿತು.

ನೂತನ ಕಾರ್ಯಾಲಯವನ್ನು ಆರ್.ಎಸ್.ಎಸ್.ನ ಪ್ರಾಂತ ಸಂಯೋಜಕ ಸುಬ್ರಾಯ ನಂದೋಡಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಬೆನ್ನುಹುರಿ ಅಪಘಾತ ಮತ್ತು ನಿರ್ವಹಣೆ, ಜಾಗೃತಿಗಾಗಿ ತಯಾರಿಸಲಾದ ಪೋಸ್ಟರ್ಗಳನ್ನು ಬಿಡುಗಡೆಗೊಳಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇವಾನಿಕೇತನ ಕಟ್ಟಡ ನಿರ್ಮಾಣಕ್ಕೆ 10 ಲಕ್ಷ ಧನಸಹಾಯವನ್ನು ಘೋಷಣೆ ಮಾಡಿ ಮಾತನಾಡಿದರು.

ವಾರ್ಷಿಕ ವರದಿಯನ್ನು ಶಾಸಕ ಹರೀಶ್ ಪೂಂಜ ಬಿಡುಗಡೆಗೊಳಿಸಿ ಈ ಬಾರಿಯ ಶಾಸಕರ ನಿಧಿಯಿಂದ ಕಟ್ಟಡದ ಅಭಿವೃದ್ಧಿಗೆ ರೂ. 15ಲಕ್ಷ ಹಾಗೂ ವೈಯಕ್ತಿಕ ನೆಲೆಯಲ್ಲಿ ಸಂಗ್ರಹಿಸಿ ರೂ.5 ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಉದ್ಯಮಿ ಹಾಗೂ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಅವರು ಮಾತನಾಡಿ, ಸೇವಾ ಭಾರತಿಯ ನೂತನ ಕಟ್ಟಡ ನಿರ್ಮಾಣಕ್ಕೆ ತನ್ನ ಶಕ್ತಿ ಮೀರಿ ಸಹಾಯ ಮಾಡುವುದಾಗಿ ತಿಳಿಸಿದರು.

ಸೇವಾ ಭಾರತಿಯ ಅಧ್ಯಕ್ಷೆ ಸ್ವರ್ಣಗೌರಿ ಅಧ್ಯಕ್ಷತೆ ವಹಿಸಿ, ಸೇವಾ ಭಾರತಿಯ ಇದುವರೆಗಿನ ಸಾಧನೆಗಳ ಬಗ್ಗೆ ತಿಳಿಸಿದರು. ಬೆನಕ ಹೆಲ್ತ್ ಸೆಂಟರ್ ಉಜಿರೆಯ ಮೆಡಿಕಲ್ ಡೈರೆಕ್ಟರ್ ಡಾ. ಗೋಪಾಲಕೃಷ್ಣ ಭಟ್, ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಕೃಷ್ಣ ಭಟ್, ಎಂಆರ್‌ಪಿಎಲ್‌ನ ಅಧಿಕಾರಿ ಎಂ.ಕೆ. ರಾವ್, ಮುಂಬೈಯ ಕ್ಯಾಪ್ರಿಕಾರ್ನ್ ಅಗ್ರಿಫಾರ್ಮಸ್ ಡೆವಲಪರ್ಸ್‌ನ ಚೀಫ್ ಅಕೌಂಟೆಂಟ್ ಕೆ. ವಿಷ್ಣುಮೂರ್ತಿ ರಾವ್, ಸೇವಾಧಾಮದ ಸಂಚಾಲಕ ಕೆ. ಪುರಂದರ ರಾವ್, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ, ಸೇವಾಭಾರತಿ ಆರೋಗ್ಯ ಯೋಜನೆಯ ಸಂಚಾಲಕ ಅಖಿಲೇಶ್ ಶೆಟ್ಟಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಇದುವರೆಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರಿಗೆ, ಸೇವಾನಿಕೇತನ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿಗಳಿಗೆ, ಎರಡು ವರ್ಷಗಳಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆನ್ನೈನ್‌ನಲ್ಲಿ ಭಗವದ್ಗೀತೆ ಅಭ್ಯಾಸ ಮಾಡಿಸಿದ ಗುರುಗಳಿಗೆ ಗೌರವಿಸಲಾಯಿತು. ಸೇವಾ ಭಾರತಿಯ ಉಪಾಧ್ಯಕ್ಷ ಗಿರೀಶ್ ರಾವ್ ಕೆ.ಯು, ಕಾರ್ಯದರ್ಶಿ ಬಾಲಕೃಷ್ಣ, ಟ್ರಸ್ಟಿ ವಿಷ್ಟುಪ್ರಸಾದ್ ತೆಂಕಿಲ್ಲಾಯ, ಎ.ಜೈರಾಜ್ ಸಾಲಿಯಾನ್, ಪೃಥ್ವೀಶ ಹಾಗೂ ಸಲಹಾ ಮಂಡಳಿಯ ಸದಸ್ಯರು ಸಹಕರಿಸಿದರು. ಸಂಸ್ಥಾಪಕ ಕೆ.ವಿನಾಯಕ ರಾವ್ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸೇವಾಭಾರತಿ ಟ್ರಸ್ಟಿ ಪೃಥ್ವಿಶ ಹಾಗೂ ರಚನಾ ಕಾರ್ಯಕ್ರಮ ನಿರೂಪಿಸಿ, ಟ್ರಸ್ಟಿ ಜಯರಾಜ್ ಸಾಲಿಯಾನ್ ವಂದಿಸಿದರು.

Related posts

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್‌ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya

ಭಾರತೀಯ ರೆಡ್ ಕ್ರಾಸ್ ಸೊಸೈಟಿಯಿಂದ ರಾಮಣ್ಣ ಗೌಡ ರವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya
error: Content is protected !!