September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಸಹಸಂಸ್ಥೆ ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ – ಇದರ ಸಹಸಂಸ್ಥೆ – ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಹಾಗೂ ಪ್ರಥಮ ಚಿಕಿತ್ಸೆ ತರಬೇತಿ ಶಿಬಿರ, ಮತ್ತು ಹೊಯ್ಸಳ ಯೋಗಕ್ಷೇಮ (ಮನೆ ಬಾಗಿಲಿಗೆ ವೈದ್ಯಕೀಯ ಸೇವೆ) ವಾಹನ ಬಿಡುಗಡೆ ಕಾರ್ಯಕ್ರಮವು ಡಿ.3 ರಂದು ಮೂಡಿಗೆರೆ ಜೆಸಿಐ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಸಚಿವರಾದ ಸಿ.ಟಿ ರವಿ, ಇಂತಹ ಆರೋಗ್ಯ ತಪಾಸಣಾ ಶಿಬಿರವು ಜನರಲ್ಲಿ ತಮ್ಮ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ, ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಉತ್ತಮ ಆಹಾರ ಮತ್ತು ದಿನನಿತ್ಯ ವ್ಯಾಯಾಮ, ವಿವಿಧ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು,ಡಾ.ಅರ್ಪಿತಾ ಸಿಂಹ ಮತ್ತು ಡಾ.ಮುರಳಿಕೃಷ್ಣ ಇರ್ವತ್ರಾಯರ ಸಾಮಾಜಿಕ ಕಳಕಳಿಯು ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ ಎಂದರು,

ಮುಖ್ಯ ಅತಿಥಿಯಾಗಿ ಮೂಡಿಗೆರೆ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಉಪಸ್ಥಿತರಿದ್ದರು., ಹೊಯ್ಸಳ ಹೆಲ್ತ್ ಕೇರ್ ನ ಆಡಳಿತ ನಿರ್ದೇಶಕಿಯಾದ ಡಾ.ಅರ್ಪಿತಾಸಿಂಹ ಶಿಬಿರದ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಯ ಆಡಳಿತ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ ಅತಿಥಿಗಳನ್ನು ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಹೊಯ್ಸಳ ಹೆಲ್ತ್ ಕೇರ್, ವಿವಿಧ ಸಂಘ ಸಂಸ್ಥೆಗಳ ಹಾಗೂ ಮೂಡಿಗೆರೆ ಜನರ ಸಹಕಾರದಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ, ವಿಶೇಷವಾಗಿ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರಿಗೆ ಪ್ರಯೋಜನವಾಗಲಿದೆ, ಹೊಯ್ಸಳ ಹೆಲ್ತ್ ಕೇರ್ ವತಿಯಿಂದ ಮೂಡಿಗೆರೆ ಜನರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭ್ಯವಿರುವ “ಹೊಯ್ಸಳ ಹೆಲ್ತ್ ಕಾರ್ಡ್” ಬಿಡುಗಡೆ ಮಾಡಲಾಗಿದೆ ಇದರ ಸದುಪಯೋಗ ಪಡೆದುಕೊಳ್ಳಬೇಕ. ,ಸಾಮಾನ್ಯ ತಪಾಸಣೆ, ವೈದ್ಯರ ಸಮಾಲೋಚನೆ, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ರಿಯಾಯಿತಿ ದರದ ಸೂಕ್ತ ಚಿಕಿತ್ಸೆಗೆ ಸಲಹೆ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮೂಡಿಗೆರೆ ಎಂ.ಜಿ.ಎಂ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪ್ರಿಯಾಂಕ, ರೋಟರಿ ಕ್ಲಬ್ ಮೂಡಿಗೆರೆ ಇದರ ಅಧ್ಯಕ್ಷ ಹೆಚ್.ಎಂ ಪ್ರಸಾದ್, ಕೆಎಂಸಿ ಆಸ್ಪತ್ರೆ ಮಂಗಳೂರಿನ ಜನಸಂಪರ್ಕ ವಿಭಾಗ ಮುಖ್ಯಸ್ಥ ರಾಕೇಶ್, ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಯ ವೈದ್ಯಕೀಯ ಅಧೀಕ್ಷಕಿ ಡಾ.ವಂದನಾ ಎಂ ಇರ್ವತ್ರಾಯ, ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ಇಲ್ಲಿನ ಆಡಳಿತ ನಿರ್ದೇಶಕರಾದ ನವೀನ್ ಭಟ್ ತಳವಾರ, ಕೃಷ್ಣ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಳಾದ ಡಾ. ಅಲ್ಬಿನ್ ಜೋಸೆಫ್,ಡಾ.ಸಾತ್ವಿಕ್ ಕುದ್ದಣ್ಣಾಯ, ಡಾ.ಚೈತನ್ಯ, ಹೊಯ್ಸಳ ಹೆಲ್ತ್ ಕೇರ್ ನ ಮುಖ್ಯ ವೈದ್ಯಾಧಿಕಾರಿ ಡಾ.ಶಶಿಕುಮಾರ್, ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಹಾಗೂ ಹೊಯ್ಸಳ ಹೆಲ್ತ್ ಕೇರ್ ನ ಸಿಬ್ಬಂದಿಗಳು ಉಪಸ್ಥಿತರಿದ್ದರು. ಆರೀಶ್ ಕಾರ್ಯಕ್ರಮ ನಿರೂಪಿಸಿ, ಡಾ.ಅರ್ಪಿತಾ ಸಿಂಹ ಧನ್ಯವಾದವಿತ್ತರು.


ಕಾರ್ಯಕ್ರಮದಲ್ಲಿ ಮೂಡಿಗೆರೆ ಜೀವ ರಕ್ಷಕ ಅಂಬುಲೆನ್ಸ್ ಚಾಲಕರಿಗೆ ಸನ್ಮಾನ ನಡೆಯಿತು,
ಕಾರ್ಯಕ್ರಮದಲ್ಲಿ ಎಂ.ಜಿ.ಎಂ ಆಸ್ಪತ್ರೆಯ ಸಿಬ್ಬಂದಿಗಳು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರರಿಗೆ, ಕೆಎಂಸಿ ತುರ್ತು ಚಿಕಿತ್ಸಾ ವಿಭಾಗ – ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇವರ ಸಹಕಾರದೊಂದಿಗೆ, “ಪ್ರಥಮ ಚಿಕಿತ್ಸೆ (First Aid,Basic Life Support) ತರಬೇತಿ ಶಿಬಿರ ಮತ್ತು ಪ್ರಥಮ ಚಿಕಿತ್ಸಾ ಕಿಟ್ (ಫಸ್ಟ್ ಏಡ್ ಬಾಕ್ಸ್) ವಿತರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಕೆಎಂಸಿ ತುರ್ತು ಚಿಕಿತ್ಸಾ ವಿಭಾಗದ ತಜ್ಞವೈದ್ಯರಾದ ಮೋಹನ್, ತುರ್ತು ಸಂದರ್ಭಗಳಲ್ಲಿ ಹಾಗೂ ಇನ್ನಿತರ ಆನಾರೋಗ್ಯದ ಅಥವಾ ಅನಾಹುತಗಳು ಸಂಭವಿಸುವ ಹೃದಯಾಘಾತ, ನೀರಿನಲ್ಲಿ ಮುಳುಗುವುದು, ಅಗ್ನಿ ಅವಘಡ ಹಾಗೂ ಇನ್ನಿತರ ತುರ್ತು ಸಂದರ್ಭದಲ್ಲಿ ಆರೋಗ್ಯದ ಬಗ್ಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಾತ್ಯಕ್ಷಿಕೆ ಮೂಲಕ ತರಬೇತಿಯನ್ನು ನಡೆಸಿಕೊಟ್ಟರು ಶಿಬಿರದಲ್ಲಿ ಐನೂರಕ್ಕೂ ಅಧಿಕ ಸಾರ್ವಜನಿಕರು ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆದುಕೊಂಡರು.

Related posts

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಕಾಜೂರು ಉರೂಸ್‌ ಸಮಾಪ್ತಿ : ಸಾವಿರಾರು ಮಂದಿಗೆ ಅನ್ನದಾನ

Suddi Udaya

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya
error: Content is protected !!