25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

ಉಜಿರೆ : ಉಜಿರೆಯ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸಹಯೋಗದಲ್ಲಿ ಉಜಿರೆಯ ಐಟಿ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮೂರು ದಿನಗಳ ಅಂತರ್ ಕಾಲೇಜು ಮಂಗಳೂರು ವಿಭಾಗಮಟ್ಟ ಹಾಗು ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು.

ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟವನ್ನು ಉಜಿರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಉಷಾ ಕಾರಂತ್ ಉದ್ಘಾಟಿಸಿ, ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲೂ ಗುರುತಿಸಿಕೊಂಡಿದ್ದಾರೆ. ನಾವು ಪರಿಶ್ರಮ ಮತ್ತು ಪರಿಣಿತಿಯಿಂದ ಮುಂದೆ ಸಾಗಬೇಕು. ದೃಢತೆ ಮತ್ತು ಛಲವೊಂದಿದ್ದರೆ ಎಲ್ಲವು ಸಾಧ್ಯ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಹಿಳಾ ಪ್ರತಿಭೆಗಳು ಮತ್ತಷ್ಟು ಹೆಚ್ಚಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ ಮಾತನಾಡಿ, ಸಂಸ್ಥೆಯ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡೆಗೆ ವಿಶೇಷ ಆದ್ಯತೆ ಇದೆ. ಈ ಕಾರಣದಿಂದಾಗಿಯೇ ಇಂದು ಎಸ್.ಡಿ.ಎಂ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಕ್ರೀಡಾಳುಗಳು ಸ್ಪರ್ಧೇಗಳನ್ನು ಎದುರಿಸಿದಂತೆ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಬೇಕು. ಆಗ ನಮ್ಮ ಆತ್ಮ ವಿಶ್ವಾಸ ದೃಢವಾಗುತ್ತದೆ ಎಂದರು.

ಕಾರ್ಯಕ್ರಮದ ಉದ್ಘಾಟನಾ ವೇದಿಕೆಯಲ್ಲಿ ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗು ತೀರ್ಪು ಗಾರರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ನಿವೇದಿತಾ ನಿರೂಪಿಸಿ, ವಿದ್ಯಾರ್ಥಿನಿ ಅಪೇಕ್ಷಾ ಸರ್ವರನ್ನು ಸ್ವಾಗತಿಸಿದರು. ವಿದ್ಯಾರ್ಥಿನಿ ಅರ್ಚನ ವಂದಿಸಿದರು. 3 ದಿನಗಳ ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟವನ್ನು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಪ್ರಭಾಕರ್ ಸಂಯೋಜಿಸಿದರು.

ಪ್ರಶಸ್ತಿಗಳ ವಿವರ :

ಅಂತಿಮ ದಿನದ ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಬೆಂಗಳೂರು, ಮೈಸೂರು, ಮಂಡ್ಯ, ಚಿಕ್ಕ ಬಳ್ಳಾಪುರ , ಮಂಗಳೂರು ಸೇರಿದಂತೆ 15 ವಿವಿಧ ಜಿಲ್ಲೆಗಳ ಕಾಲೇಜಿನ ಮಹಿಳೆಯರ ತಂಡವು ಭಾಗವಹಿಸಿದ್ದವು. ರಾಜ್ಯ ಮಟ್ಟದ ಫೈನಲ್ ಪಂದ್ಯಟಾಕ್ಕೆ ಎರಡೂ ದಕ್ಷಿಣ ಕನ್ನಡದ ಮಂಗಳೂರು ತಂಡಗಳೇ ಪ್ರವೇಶ ಪಡೆದವು.

ಅಂತಿಮ ಪಂದ್ಯದಲ್ಲಿ ಮಂಗಳೂರಿನ ಸೈಂಟ್ ಜೋಸೆಫ್ ಕಾಲೇಜಿನ ಮಹಿಳಾ ತಂಡವು ಪ್ರಥಮ ಸ್ಥಾನ ಪಡೆದು, ಮಂಗಳೂರಿನ ಸಹ್ಯಾದ್ರಿ ಕಾಲೇಜಿನ ಮಹಿಳಾ ತಂಡದವು ದ್ವೀತಿಯ ಸ್ಥಾನ ಪಡೆಯಿತು. ತೃತೀಯ ಸ್ಥಾನವನ್ನು ಚಿಕ್ಕಬಳ್ಳಾಪುರದ ಎಸ್.ಜೆ.ಸಿ.ಐಟಿ ಕಾಲೇಜಿನ ಮಹಿಳಾ ತಂಡವು ತೃತೀಯ ಸ್ಥಾನವನ್ನು ಪಡೆಯಿತು. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಹಿಳಾ ತಂಡ‌ ಚತುರ್ಥ ಸ್ಥಾನ ಪಡೆಯಿತು.

ವೈಯಕ್ತಿಕ ಪ್ರಶಸ್ತಿಗಳ ಭಾಗವಾಗಿ ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಸೈಂಟ್ ಜೋಸೆಫ್ ಕಾಲೇಜಿನ ನಿಶಾ ಆಲ್ ರೌಂಡರ್, ಭೂಮಿಕಾ ಉತ್ತಮ ರಿಸೀವರ್ ಹಾಗು ಮಂಗಳೂರಿನ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿ ಕುಶಿ ಉತ್ತಮ ಎಸೆತಗಾರ್ತಿ ಪ್ರಶಸ್ತಿಯನ್ನು ಪಡೆದರು. ಅಂತರ್ ಕಾಲೇಜು ಮಂಗಳೂರು ವಿಭಾಗಮಟ್ಟದ ಪಂದ್ಯದಲ್ಲಿ ಉತ್ತಮ ಆಲ್ ರೌಂಡರ್ ಸೈಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿನಿ ಡಿಯೋನಾ, ಉತ್ತಮ ರಿಸೀವರ್ ಮಂಗಳೂರಿನ ಸಹ್ಯಾದ್ರಿ ಕಾಲೇಜಿನ ದಿಯಾ ಹಾಗು ಉತ್ತಮ ಎಸೆತ ಪ್ರಶಸ್ತಿಯನ್ನು ಉಜಿರೆಯ ಎಸ್.ಡಿ.ಎಂ ಐಟಿ ಕಾಲೇಜಿನ ರಕ್ಷಿತಾ ಪಡೆದು ಕೊಂಡರು.

ಮೊದಲನೆಯ ದಿನದ ಆರಂಭ ಪಂದ್ಯದಲ್ಲಿ ಮಂಗಳೂರು, ಸುಳ್ಯ, ಮೂಡುಬಿದಿರೆ, ಕುಂದಾಪುರ ಸೇರಿದಂತೆ 12 ವಿವಿಧ ಕಾಲೇಜಿನ ತಂಡಗಳು ಸೆಣಸಾಡಿದವು. ಅಂತರ್ ಕಾಲೇಜು ಮಂಗಳೂರು ವಿಭಾಗಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಮಂಗಳೂರಿನ ಸೈಂಟ್ ಜೋಸೆಫ್ ಕಾಲೇಜಿನ ಮಹಿಳಾ ತಂಡವು ಪ್ರಥಮ ಸ್ಥಾನ ಪಡೆದು, ಮಂಗಳೂರಿನ ಸಹ್ಯಾದ್ರಿ ಕಾಲೇಜಿನ ಮಹಿಳಾ ತಂಡದವು ದ್ವೀತಿಯ ಸ್ಥಾನ ಪಡೆಯಿತು. ಅತೀಥೆಯ ಉಜಿರೆಯ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮಹಿಳಾ ತಂಡವು ತೃತೀಯ ಸ್ಥಾನಕ್ಕೆ ಭಾಜನರಾದರು.

ವಿಜೇತ ತಂಡಗಳಿಗೆ ಉಜಿರೆಯ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು.
ಉಪನ್ಯಾಸಕರಾದ ಡಾ.ರವೀಶ್ ಪ್ರಶಸ್ತಿ ವಾಚಿಸಿದರು. ಉಪನ್ಯಾಸಕ ಡಾ. ನವೀನ್ ಸಹಕರಿಸಿದರು.

Related posts

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya
error: Content is protected !!