37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು.

ಉಜಿರೆಯ ರತ್ನಮಾನಸದ ಸಹಪಾಲಕರಾದ ರವಿಚಂದ್ರ ಬಿ ಇವರು ದೀಪ ಪ್ರಜ್ವಲನ ಮಾಡುವುದರ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿ ಶಾಲಾ ಹಂತದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಎಲ್ಲರೂ ಸಕ್ರಿಯವಾಗಿ ತನ್ನನ್ನು ತಾನು ತೊಗಡಿಸಿಕೊಂಡು ಕ್ರೀಡಾಸ್ಪೂರ್ತಿಯನ್ನು ಮೆರೆಯಬೇಕು, ಕ್ರೀಡೆಯಲ್ಲಿ ಸೋಲು ಗೆಲುವು ಎನ್ನುವುದು ಮುಖ್ಯವಲ್ಲ ಭಾಗವಹಿಸುವಿಕೆಯ ಮುಖ್ಯ ಎಂದು ಅಭಿಪ್ರಾಯಪಟ್ಟರು.


ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ವಹಿಸಿ ಮಾತನಾಡಿ ವಿದ್ಯಾರ್ಥಿಗಳ ಶರೀರಿಕ ಬೆಳವಣಿಗೆಗೆ ಕ್ರೀಡೆ ಅತ್ಯಂತ ಮಹತ್ವ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕ್ರೀಡಾ ಪ್ರತಿಜ್ಞೆಯನ್ನು ಶಾಲಾ ವಿದ್ಯಾರ್ಥಿಯಾದ ಶಬ್ ನಮ್ ಬೋಧಿಸಿದರು.
ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿಯಾದ ಶ್ರೀಮತಿ ಯಶೋಧ ಸ್ವಾಗತಿಸಿ, ಶಾಲಾ ಹಿರಿಯ ಶಿಕ್ಷಕಿಯಾದ ಶ್ರೀಮತಿ ತೇಜಾವತಿ ಧನ್ಯವಾದವಿತ್ತರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಶೀಲಾ ನಿರೂಪಿಸಿದರು.

Related posts

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya

ಉಜಿರೆ: ಆಲ್ವಿನ್ ಮೆಂಡೋನ್ಸಾ ನಿಧನ

Suddi Udaya

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya
error: Content is protected !!