24.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟೀಸ್ ನೀಡಲಾಗಿರುವುದಾಗಿ ತಿಳಿದು ಬಂದಿದೆ.

ಈ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ಆದೇಶ ಮಾಡಿದ್ದರು ಈ ಆದೇಶವನ್ನು ಪ್ರಶ್ನಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಗಡಿಪಾರು ಆದೇಶವನ್ನು ರದ್ದುಪಡಿಸಿ ಆದೇಶ ನೀಡಿತ್ತು ಹಾಗೂ ಅವರನ್ನು ಗಡಿಪಾರು ಮಾಡಬೇಕಾದರೆ ಮತ್ತೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.

ಅದರಂತೆ ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡುವ ಬಗ್ಗೆ ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯ ಮತ್ತೆ ನೋಟೀಸ್ ನೀಡಿದೆ. ಲಭ್ಯ ಮಾಹಿತಿಯಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಡಿ.8 ರಂದು ಪುತ್ತೂರು ಎಸಿ ಮುಂದೆ ಹಾಜರಾಗಲು ನೋಟಿಸ್ ಜಾರಿ ಮಾಡಿದೆ. ಈಗ ನೀಡಿರುವ ನೋಟೀಸ್ ನಲ್ಲಿ ಹೊಸದಾಗಿ ದಾಖಲಾಗಿರುವ ಪ್ರಕರಣಗಳನ್ನು ಸೇರಿಸಿ ನೋಟೀಸ್ ನೀಡಲಾಗಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ. ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿವಾದ ಮತ್ತೆ ಮುನ್ನೆಲೆಗೆ ಬಂದಂತಾಗಿದೆ.

Related posts

ಉಜಿರೆಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya
error: Content is protected !!