March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯು ಡಿ.5ರಂದು ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ ಭಾಗವಹಿಸಿ ಮಾತನಾಡಿದರು. ಚಿತ್ರಕಲಾ ಸ್ಪರ್ಧಾ ತೀರ್ಪುಗಾರರಾಗಿ ಗಣೇಶ್ ಆಚಾರ್ಯ ಗುಂಪಲಾಜೆ ಉಪಸ್ಥಿತರಿದ್ದರು.

ತಾಲೂಕಿನ 20 ಸರಕಾರಿ ಶಾಲೆಗಳಲ್ಲಿ 1500 ಮಕ್ಕಳಿಗೆ ಸ್ಪರ್ಧೆಯನ್ನು ಏರ್ಪಡಿಸಿದ್ದು, ಅದರಲ್ಲಿ ಆಯ್ದ 60 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅಂತಿಮ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ನಂತರ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಅನ್ವಿತಾ 5ನೇ ತರಗತಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಉಜಿರೆ ಪ್ರಥಮ, ತನ್ವಿ ಪಿವಿ 5ನೇ ತರಗತಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಉಜಿರೆ ದ್ವಿತೀಯ, ಆಯಿಶತ್ ಹಿಶನ 5ನೇ ತರಗತಿ ಗುರುವಾಯನಕೆರೆ ಶಾಲೆ ತೃತೀಯ ಸ್ಥಾನವನ್ನು ಪಡೆದುಕೊಂಡರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಂಸಾನಾ ಪತ್ರ ಹಾಗೂ ವಿಶೇಷ ಬಹುಮಾನಗಳನ್ನು ವಿತರಿಸಲಾಯಿತು.

ಬೆಳ್ತಂಗಡಿ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಪ್ರಸ್ತಾವಿಸಿ ಮಾತನಾಡಿದರು. ಸಹಾಯಕ ನಿರ್ವಾಹಕ ಕೃಪೇಶ್ ಸ್ವಾಗತಿಸಿ ನಿರೂಪಿಸಿದರು.

ಈ ಸಂದರ್ಭದಲ್ಲಿ ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು, ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು, ಪೋಷಕರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya
error: Content is protected !!