September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾ.ಪಂ., ತಣ್ಣೀರುಪಂತ ಅರಿವು ಕೇಂದ್ರ ಗ್ರಂಥಾಲಯ ಇದರ ಸಹಭಾಗಿತ್ವದಲ್ಲಿ 2025-26ನೇ ಸಾಲಿನ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನ ನಡೆಸುವ ಕುರಿತು ಡಿ.6ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿಯವರ ಅಧ್ಯಕ್ಷತೆಯಲ್ಲಿ ತಣ್ಣೀರುಪಂತ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪೂರ್ವ ಸಿದ್ಧತೆ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಂಥಾಲಯ ಸಲಹಾ ಸಮಿತಿಯ ಅಧ್ಯಕ್ಷರು, ಸದಸ್ಯರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಮುಖ್ಯ ಗುರುಗಳು, ಅಂಗನವಾಡಿ ಬಾಲವಿಕಾಸ ಸಮಿತಿಯ ಅಧ್ಯಕ್ಷರು ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಇಲಾಖೆಯ ಸಿಹೆಚ್‌ಒ, ಆಶಾ ಕಾರ್ಯಕರ್ತರು ಹಾಗೂ ಗ್ರಾಮದ ಬಿಟ್ ಪೊಲೀಸ್ ಉಪಸ್ಥಿತರಿದ್ದರು.

ಮಕ್ಕಳ ಸೇಹಿ ಗ್ರಾಮ ಪಂಚಾಯತ್ ಅಭಿಯಾನ ಕಾರ್ಯಕ್ರಮದ ರೂಪರೇಷಗಳ ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ ಜಿ.ಹೆಚ್. ಸಭೆಯಲ್ಲಿ ತಿಳಿಸಿದರು. ಪಂಚಾಯತ್ ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮ

Suddi Udaya

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

Suddi Udaya
error: Content is protected !!