ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

ಉಜಿರೆ:ಡಿ6. ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.6 ರಂದು ದ.ಕ ಹಾಗೂ ಉಡುಪಿ ಜಿಲ್ಲೆಯ ಐ.ಸಿ.ಎಸ್.ಇ (Indian Certificate of Secondary Education) ಹಾಗೂ ಸಿ.ಬಿ.ಎಸ್.ಇ (Central Board of Secondary Education) ಶಾಲೆಗಳ ಸಹಯೋಗದೊಂದಿಗೆ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ “SDM SPLASH 2025” ಅಂತರ ಶಾಲಾ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಆಯೋಜಿಸಲಾಗಿತ್ತು.

ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಕಾರ್ಯಕ್ರಮ ಉದ್ಘಾಟಿಸಿ ಆಗಮಿಸಿದ ಎಲ್ಲಾ ಶಾಲೆಯ ಸ್ಪರ್ಧೆಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಮ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಎಮ್. ಜನಾರ್ಧನ್ ಹಾಗೂ ಮಂಗಳೂರಿನ ಜೈ ಹಿಂದ್ ಸ್ವಿಮ್ಮಿಂಗ್ ಕ್ಲಬ್ ಮುಖ್ಯ ಈಜು ತರಬೇತುದಾರರಾದ ಶ್ರೀ ರಾಮಕೃಷ್ಣ ರಾವ್ ಆಗಮಿಸಿ ವಿಜೇತರಾದ ಸ್ಪರ್ಧಿಗಳನ್ನು ಅಭಿನಂದಿಸಿ ಬಹುಮಾನ ವಿತರಿಸಿದರು.

ಸ್ಪರ್ಧೆಯಲ್ಲಿ ದ.ಕ ಹಾಗೂ ಉಡುಪಿ ಜಿಲ್ಲೆಯ 20 ಶಾಲೆಗಳಿಂದ ಸುಮಾರು 200 ಸ್ಪರ್ಧಿಗಳು ಭಾಗವಹಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಮ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ್, ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್, ಮಂಗಳೂರಿನ ವಿ ವನ್ ಆಕ್ವಾ ಸೆಂಟರ್ ನ ನಿರ್ದೇಶಕರಾದ ನವೀನ್, ಎಸ್.ಡಿ. ಎಮ್ ಸ್ಪೋರ್ಟ್ಸ್ ಕ್ಲಬ್ ಕ್ರೀಡಾ ಕಾರ್ಯದರ್ಶಿ ರಮೇಶ್ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕಿ ನೀತು ಪ್ರಸಾದ್ ಹಾಗೂ ಉಜಿರೆ ಎಸ್.ಡಿ.ಎಮ್ ಬಿ.ಎನ್.ವೈ.ಎಸ್ ಕಾಲೇಜಿನ ಪಿ.ಡಿ ಶ್ರೀ ಧರ್ಮೇಂದ್ರ ಇವರು ಕಾರ್ಯಕ್ರಮ ನಿರೂಪಿಸಿದರು.

Related posts

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಅಳದಂಗಡಿಯಲ್ಲಿ “ನೊಚ್ಚ ಸೆರಾಮಿಕ್ಸ್” ಪ್ರಾರಂಭೋತ್ಸವ: ಶಾಸಕ ಹರೀಶ್ ಪೂಂಜ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

Suddi Udaya

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!