37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ದೋಷಾ ರೋಪಪಟ್ಟಿನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ವರದಿಗಳನ್ನಷ್ಟೆ ಕೋರ್ಟ್‌ಗೆ ಸಲ್ಲಿಸಲಾಗಿದೆ. ತನಿಖಾ ಹಂತದಲ್ಲಿರುವ ಪ್ರಕರಣದ ಬಗ್ಗೆ ಹೆಚ್ಚು ಚರ್ಚೆ ಮಾಡಲು ಆಗುವುದಿಲ್ಲ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವ‌ರ್ ತಿಳಿಸಿದ್ದಾರೆ.

ಬೆಂಗಳೂರಿನ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ನಾನಾಗಲಿ, ಮುಖ್ಯಮಂತ್ರಿಗಳಾಗಲಿ ವಿಶೇಷ ತನಿಖಾ ತಂಡದ (ಎಸ್ ಐಟಿ) ಅಧಿಕಾರಿಗಳಿಗೆ ಕರೆ ಮಾಡಿ ಮಾತಾಡಿಲ್ಲ. ಎಸ್‌ಐಟಿ ತಂಡಕ್ಕೆ ಸ್ವಾತಂತ್ರ್ಯವಾಗಿ ತನಿಖೆ ನಡೆಸಲು ಅನುಮತಿ ಕೊಟ್ಟಿದ್ದೇವೆ. ಈ ಪ್ರಕರಣದಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ. ತನಿಖೆ ಸೂಕ್ತವಾಗಿ ಸಾಗಬೇಕಿದೆ ಎಂದು ಹೇಳಿದರು.

ಧರ್ಮಸ್ಥಳ ಪ್ರಕರಣದ ತನಿಖೆ ಸರಿಯಾಗಿ ಮಾಡಲಿಲ್ಲ ಎಂದಾದರೆ, ಪ್ರಕರಣದ ಬಗ್ಗೆ ಸೂಕ್ತ ಮಾಹಿತಿ ಒದಗಿಸದಿದ್ದಾಗ, ಸರಿಯಾದ ತನಿಖೆ ನಡೆಯಧಿದ್ದಾಗ ಕೋರ್ಟ್ ತಡೆ ನೀಡುತ್ತದೆ. ಧರ್ಮಸ್ಥಳ ಪ್ರಕರಣದಲ್ಲಿ ಇನ್ನೂ ತನಿಖೆ ಮುಗಿದಿಲ್ಲ. ಮುಂದೆ ತನಿಖೆ ಎತ್ತ ಸಾಗುತ್ತದೆ ಎಂಬುದನ್ನು ಕಾದು ನೋಡಿ. ಚಾರ್ಜ್‌ ಶೀಟ್ ಕೊಟ್ಟ ಕೂಡಲೇ ಪ್ರಕರಣ ಮುಗಿದಿದೆ ಎಂದರ್ಥವಲ್ಲ. ತನಿಖೆ ಮಾಡಿದಾಗ ಬುರುಡೆ ಸಹಿತ ಪ್ರಕರಣಗಳಲ್ಲಿ ಯಾರ್ಯಾರು ಶಾಮೀಲಾಗಿದ್ದಾರೆ ಎಂಬಿತ್ಯಾದಿ ವಿಷಯಗಳನ್ನು ಸಂಗ್ರಹಿಸಿ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದರು.

Related posts

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಬೆಳ್ತಂಗಡಿ:ಪೃಥ್ವಿ ಜ್ಯುವೆಲ್ಸ್ ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ,ಪೋಟೋ ವಿಜೇತರಿಗೆ ಪ್ರಶಸ್ತಿ

Suddi Udaya
error: Content is protected !!