September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭನೆಯ ಸ್ಥಾಪನೆ ಡಿ.೫ರಂದು ವೇದಮೂರ್ತಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಯವರ ಮಾರ್ಗದರ್ಶನದಲ್ಲಿ ಶ್ರೀ ಪ್ರಸಾದ್ ಮುನಿಯಂಗಳರವರ ವಾಸ್ತುಶಿಲ್ಪ ಶಾಸ್ತ್ರದ ಪ್ರಕಾರ ವಿವಿಧ ವೈದಿಕ ಕಾರ್ಯಕ್ರಮಗಳ ಮೂಲಕ ಪ್ರತಿಷ್ಠಾಪನೆ ನಡೆಯಿತು.

ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಜಗದ್ಗುರು ಪೀಠದ ಪೀಠಧೀಶರಾದ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ ಸ್ವಾಮೀಜಿಯವರು ಭೇಟಿ ನೀಡಿ ಶುಭ ಹಾರೈಸಿದರು.

ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಿರುವ ನೂತನ ಶಿಲಾಮಯ ಧ್ವಜಸ್ಥಂಭವನ್ನು ಬಜಗೋಳಿಯ ಶಿಲ್ಪಿ ಸುಧಾಕರ ಡೋಂಗ್ರೆ ಕೆಟ್ಟಿದ್ದು ಉಜಿರೆಯಿಂದ ಡಿ.೪ರಂದು ಭವ್ಯವಾದ ಮೆರವಣಿಗೆ ಮೂಲಕ ಕ್ಷೇತ್ರಕ್ಕೆ ತರಲಾಗಿತ್ತು.

ಬೆಳಿಗ್ಗೆ ದೇವಸ್ಥಾನದಲ್ಲಿ ಗಣ ಹೋಮ, ವಿವಿಧ ಪೂಜಾ ವಿಧಿ ವಿಧಾನ ನೆರವೇರಿ, ಮಧ್ಯಾಹ್ನ ಮಹಾ ಪೂಜೆ, ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಜಾತ್ರೋತ್ಸವ ಸಮಿತಿಯ ಗೌರವ ಅಧ್ಯಕ್ಷ ರಕ್ಷಿತ್ ಶಿವರಾಮ್, ಅಧ್ಯಕ್ಷ ಸುನೀಲ್ ಕನ್ಯಾಡಿ, ಸದಸ್ಯರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಗೌಡ, ಸದಸ್ಯರು, ಅರ್ಚಕ ವೃಂದ, ಊರ ಭಕ್ತ ವೃಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya

ಮೇ 31: ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಉದ್ಘಾಟನೆ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya
error: Content is protected !!