32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧನುಶ್ರೀ ಎಸ್ ಕುಲಾಲ್ ತೃತೀಯ

ವೇಣೂರು: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸ.ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ಇಲ್ಲಿನ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾಳೆ.

ಇತ್ತೀಚೆಗಷ್ಟೇ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಇದರ ಆಶ್ರಯದಲ್ಲಿ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಜರಗಿದ ರಾಜ್ಯಮಟ್ಟದ ರಾಜ್ಯ ಸ್ಪರ್ಧೆ ಭಾಷಣ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ನಾಲ್ಕು ವಿಭಾಗಗಳಿಂದ ಸ್ಪರ್ಧಿಸಿದ 106 ವಿದ್ಯಾರ್ಥಿಗಳಲ್ಲಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಳು. ಇವರು ಪಿಲ್ಯದ ಶೈಲಜಾ ಮತ್ತು ಸತೀಶ್ ಬಂಗೇರ ದಂಪತಿಗಳ ಪುತ್ರಿಯಾಗಿದ್ದು, ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಪಿಲ್ಯದ ಹಳೆ ವಿದ್ಯಾರ್ಥಿನಿಯಾಗಿದ್ದಾಳೆ.

Related posts

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಮುಂದೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!