37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಆರೋಪಿಯಾಗಿರುವ ಚಿನ್ನಯ್ಯನಿಗೆ ಜೀವ ಬೆದರಿಕೆಯಿದ್ದು ಆತನಿಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಆತನಿಗೆ ವಿಧಿಸಿರುವ ಹತ್ತನೆಯ ನಿಬಂಧನೆಯನ್ನು ಸಡಿಲಗೊಳಿಸಬೇಕು ಎಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಚಿನ್ನಯ್ಯನ ಪರ ವಕೀಲರು ಡಿ.6 ರಂದು ಅಪೀಲು ಸಲ್ಲಿಸಿದ್ದಾರೆ.

ಸಾಕ್ಷಿ ಸಂರಕ್ಷಣಾ ಕಾಯ್ದೆಯಲ್ಲಿ ರಕ್ಷಣೆ ಪಡೆದಿದ್ದ ಚಿನ್ನಯ್ಯ ಆರೋಪಿಯಾದ ಬಳಿಕ ಈ ರಕ್ಷಣೆಯನ್ನು ಕಳೆದುಕೊಂಡಿದ್ದ ಇದೀಗ ದಕ್ಷಿಣ ಕನ್ನಡ ಜಿಲ್ಲಾ ಸಕ್ಷಮ ಪ್ರಾಧಿಕಾರದ ಮುಂದೆಯೂ ನ್ಯಾಯವಾದಿಗಳು ಚಿನ್ನಯ್ಯನಿಗೆ ರಕ್ಷಣೆ ನೀಡುವಂತೆ ಮನವಿ ಸಲ್ಲಿಸಿದ್ದು ಇದರ ಆಧಾರದ ಮೇಲೆ ಬೆಳ್ತಂಗಡಿ ನ್ಯಾಯಾಲಯದಲ್ಲಿಯೂ ಆತನಿಗೆ ಜೀವ ಭಯವಿದ್ದು ಸೂಕ್ತ ರಕ್ಷಣೆ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.ಅದೇ ರೀತಿ ಬುರುಡೆ ಚಿನ್ನಯ್ಯ ಜಾಮೀನಿನ ಮೇಲೆ ಹೊರ ಬಂದರೆ ಆತ ಸ್ಥಳಿಯ ಠಾಣೆಗೆ ಬಂದು ಸಹಿ ಹಾಕುವಂತೆ ನಿಬಂಧನೆ ವಿಧಿಸಲಾಗಿದ್ದು ಈ ನಿಬಂಧನೆಯನ್ನು ಸಡಿಲಿಸುವಂತೆ ನ್ಯಾಯಾಲಯದ ಮುಂದೆ ಮನವಿ ಸಲ್ಲಿಸಲಾಗಿದೆ.

ಆರೋಪಿ ಚಿನ್ನಯ್ಯ ಜಾಮೀನು ಲಭಿಸಿದರೆ ಆತನ ಊರಾದ ಮಂಡ್ಯದಲ್ಲಿ ವಾಸಿಸಲು ನಿರ್ಧರಿಸಿದ್ದಾನೆ. ಈ ಹಿನ್ನಲೆಯಲ್ಲಿ ಠಾಣೆಗೆ ಹಾಜರಾತಿಗೆ ವಿನಾಯತಿ ನೀಡುವಂತೆಯೂ ವಿನಂತಿಸಲಾಗಿದೆ.ಆರೋಪಿ ಚಿನ್ನಯ್ಯ ರಕ್ಷಣೆ ಕೋರಿರುವ ಬಗ್ಗೆ ರಕ್ಷಣೆ ನೀಡುವ ಬಗ್ಗೆ ಬೆಳ್ತಂಗಡಿ ವೃತ್ತ ನಿರೀಕ್ಷಕರಿಂದ ಹಾಗೂ ಇತರ ವಿಚಾರಗಳ ಬಗ್ಗೆ ಎಸ್.ಐ.ಟಿ ಅಧಿಕಾರಿಗಳಿಂದ ನ್ಯಾಯಾಲಯ ವರದಿಯನ್ನು ಕೋರಿದೆ. ಸೆಕ್ಷನ್‌ 215 ರ ಕುರಿತಾದ ವರದಿಯ ಬಗ್ಗೆ ವಾದ ಮಂಡಿಸಲು ವಕೀಲರು ಸಮಯಾವಕಾಶ ಕೋರಿದ್ದು ಒಟ್ಟು ಪ್ರಕರಣದ ವಿಚಾರಣೆಯನ್ನು ಡಿ. 9 ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

Related posts

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಜೆಸಿಐ ವಲಯ 15 ರ ತರಬೇತಿ ವಿಭಾಗಕ್ಕೆ ಜೆಸಿಐ ಬೆಳ್ತಂಗಡಿಯ ಆಶಾಲತಾ ಪ್ರಶಾಂತ್ ಸಂಯೋಜಕರಾಗಿ ನಿಯೋಜನೆ

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Suddi Udaya

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya
error: Content is protected !!