ಹೊಸಂಗಡಿ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ರಿ. ಇದರ ವತಿಯಿಂದ ಡಿ.7ರಂದು ನಡೆದ ಕಬ್ಬಡ್ಡಿ ಪಂದ್ಯಾಟದಲ್ಲಿ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡವು ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.

ಶಾಲಾ ಪ್ರಾಂಶುಪಾಲರು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿಸಿ ಶುಭಹಾರೈಸಿದರು.











