September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ 12 ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟ, ಸಮಾಜದ 6 ಜೋಡಿ ಅವಳಿಗಳಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶಿವಗಿರಿಯ ಶಾಖಾ ಮಠಕ್ಕೆ ರಾಜ್ಯದಲ್ಲಿ 5 ಎಕರೆ ಸ್ಥಳ ಗುರುತಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಿಳಿಸಿದ್ದು, ಮಠ ಬೆಳ್ತಂಗಡಿ ತಾಲೂಕಿನಲ್ಲಿ ನಿರ್ಮಾಣವಾಗಬೇಕು. ತಾಲೂಕಿನ ಪ್ರಮುಖ ವೃತ್ತದಲ್ಲಿ ಕೀರ್ತಿಶೇಷ ಕೆ.ವಸಂತ ಬಂಗೇರರ ಪುತ್ಥಳಿ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಸಹಕಾರದೊಂದಿಗೆ ಬೆಳ್ತಂಗಡಿ ಜೂನಿಯ‌ರ್ ಕಾಲೇಜು ಮೈದಾನದ ದಿ.ಕೆ.ವಸಂತ ಬಂಗೇರ ಸಭಾ ವೇದಿಕೆಯಲ್ಲಿ 12ನೇ ವರ್ಷದ ಕೋಟಿ-ಚೆನ್ನಯ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ.ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್ ಮಾತನಾಡಿದರು. ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಅಧ್ಯಕ್ಷತೆ ವಹಿಸಿದ್ದರು.

ಬಿಲ್ಲವ ಮಹಿಳಾ ವೇದಿಕೆ ಸ್ಥಾಪಕಾಧ್ಯಕ್ಷೆ ಸುಜಿತಾ ವಿ.ಬಂಗೇರ ಕ್ರೀಡಾಜ್ಯೋತಿ ಹಸ್ತಾಂತರಿಸಿದರು. ಕ್ರೀಡಾ ವಾಹನ ಜಾಥಾಕ್ಕೆ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಚಾಲನೆ ನೀಡಿದರು. ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಧ್ವಜಾರೋಹಣ ನೆರವೇರಿಸಿದರು.

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ.ರಾಜಾರಾಮ್ ಕೆ.ಬಿ., ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ, ಗುರುವಾಯನಕೆರೆ ಎನ್.ಇ.ಇ.ಟಿ. ನರ್ಸಿಂಗ್ ಕಾಲೇಜಿನ ಮ್ಯಾನೇಜಿಂಗ್ ಡೈರೆಕ್ಟರ್ ಸಜಿ ಆರ್., ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮಂಡಳಿ ತಾಲೂಕು ಸಂಚಾಲಕ ನಿತ್ಯಾನಂದ ನಾವರ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಬಂಟ್ವಾಳ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಯೋಗಿಶ್ ಕುಮಾ‌ರ್ ನಡಕ್ಕರ, ಅಪರ ಸರ್ಕಾರಿ ವಕೀಲ ಮನೋಹರ್ ಕುಮಾರ್, ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಸಂಘದ ಮಾಜಿ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಕ್ರೀಡಾ ನಿರ್ದೇಶಕ ತನುಷ್ ಜಿ.ಹೆರಾಜೆ, ಯುವ ಬಿಲ್ಲವ ವೇದಿಕೆ ಕ್ರೀಡಾ ಕಾರ್ಯದರ್ಶಿ ದೇವಿಪ್ರಸಾದ್ ಬರಮೇಲು, ಸದಾನಂದ ಪೂಜಾರಿ ಉಂಗಿಲಬೈಲು, ಶಿರ್ಲಾಲು ಸಿ.ಎ. ಬ್ಯಾಂಕ್ ಅಧ್ಯಕ್ಷ ಸುಧೀರ್ ಆರ್.ಸುವರ್ಣ, ರೂಪೇಶ್ ಕೆ.ಧರ್ಮಸ್ಥಳ ಮತ್ತಿತರರಿದ್ದರು.

ವಿಶ್ವಕಪ್ ವಿಜೇತ ಕಬಡ್ಡಿ ತಂಡದ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ನೇತೃತ್ವದಲ್ಲಿ ಕ್ರೀಡಾಜ್ಯೋತಿ ಕ್ರೀಡಾಂಗಣಕ್ಕೆ ಸಾಗಿ ಬಂತು. ಬಳಿಕ ಧನಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು. ಸಮಾಜದ 6 ಜೋಡಿ ಅವಳಿಗಳನ್ನು ಗೌರವಿಸಲಾಯಿತು. ವಿಜಯ ಹರಿದಾಸ್ ಪ್ರಾರ್ಥಿಸಿದರು. ನಿತೀಶ್ ಎಚ್.ಕುಕ್ಕೇಡಿ ಸ್ವಾಗತಿಸಿದರು.ಸತೀಶ್ ಹೊಸ್ಮಾರ್ ನಿರೂಪಿಸಿದರು. ಪ್ರಸಾದ್ ಎಂ.ಕೆ. ವಂದಿಸಿದರು.

Related posts

ಬಂದಾರು ಮತ್ತು ಮೊಗ್ರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ

Suddi Udaya

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಾರ್ವಜನಿಕ ರಸ್ತೆಯ ದುರ್ಬಳಕೆ ವಿರುದ್ಧ ಎಸ್.ಡಿ.ಪಿ.ಐ. ದೂರು

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya
error: Content is protected !!