September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ರಾಜ್ಯ ಪಠ್ಯಕ್ರಮ ಶಾಲೆಯ ವಾರ್ಷಿಕೋತ್ಸವ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ರಾಜ್ಯ ಪಠ್ಯಕ್ರಮ, ಉಜಿರೆ ಶಾಲೆಯ ವಾರ್ಷಿಕೋತ್ಸವವನ್ನು ಇಂದ್ರಪ್ರಸ್ಥ ಸಭಾಂಗಣದಲ್ಲಿ ಡಿ.05 ರಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಲಕ್ಷ್ಮಿ ಗ್ರೂಪ್ ಮಾಲೀಕ ಮೋಹನ್ ಕುಮಾರ್, ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಂಯೋಜಕರಾದ ಎಸ್. ಎನ್. ಕಾಕತ್ಕರ್ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಉದ್ಘಾಟಿಸಿದರು. ಹಾಗೂ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರಶಂಸಿಸಿದರು.

ವಿದ್ಯಾರ್ಥಿಗಳಿಂದ ವಿವಿಧ ರೀತಿಯ ನೃತ್ಯ ಪ್ರದರ್ಶನ, ವರ್ಣರಂಜಿತ ಕಾರ್ಯಕ್ರಮಗಳು ನಡೆಯಿತು.
ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಂಯೋಜಕರಾದ ಎಸ್. ಎನ್. ಕಾಕತ್ಕರ್ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ರವರು ಶಾಲಾ ವಾರ್ಷಿಕ ಸಂಚಿಕೆ ಛಾತ್ರ ದ್ಯುತಿ ಬಿಡುಗಡೆಗೊಳಿಸಿದರು.

ವಿದ್ಯಾರ್ಥಿ ಜ್ಞಾನ್ ಅನ್ವೇಷ್ ವಾರ್ಷಿಕ ವರದಿ ವಾಚನ ಮಾಡಿದರು.

ಈ ಸಂದರ್ಭದಲ್ಲಿ ಪ್ರತಿ ವಿಭಾಗದಲ್ಲೂ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳು ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಪ್ರತಿಭಾ ದಿನಾಚರಣೆಗೆ ಆಗಮಿಸಿದ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರರವರು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಶುಭ ಹಾರೈಸಿದರು.

ಪ್ರತಿಭಾ ದಿನಾಚರಣೆ ಹಿನ್ನೆಲೆಯಲ್ಲಿ ಹೆಗ್ಗಡೆಯವರ ಸಾಮಾಜಿಕ ಸೇವೆಯನ್ನು ಸ್ಮರಿಸುವ ನೃತ್ಯ ಎಲ್ಲರ ಗಮನ ಸೆಳೆದಿದ್ದು ಹಾಗೂ ಖಾವಂದರ ವೇಷಧಾರಿ ವಿದ್ಯಾರ್ಥಿ ಪ್ರಸ್ತುತ್ ಪಿ ಹೆಗ್ಗಡೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು. ಈ ನೃತ್ಯದ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಪ್ರಸಾರ ಹೊಂದಿದೆ.

ಪ್ರತಿಭಾ ದಿನಾಚರಣೆ 2025 ರ ಅಂಗವಾಗಿ ಪ್ರತಿಭಾ ಪುರಸ್ಕಾರ ದಿನವನ್ನು ಡಿ.01 ರಂದು ನಡೆಸಿದ್ದು, ವಿದ್ಯಾರ್ಥಿಗಳನ್ನು ದೀಕ್ಷಾ, ಮ್ಯಾನೇಜರ್ ಎಸ್ ಬಿಐ ಉಜಿರೆ ಹಾಗೂ ಡಾ. ಶೈಲಜಾ, ನಿವೃತ್ತ ಕಾರ್ಯನಿರ್ವಹಣಾ ನಿರ್ದೇಶಕರು, ಕೃಷಿ ಇಲಾಖೆ ಇವರು ಪ್ರಶಸ್ತಿ ನೀಡಿ ಅಭಿನಂದಿಸಿದರು ಹಾಗೂ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಶಾಲಾ ಮುಖ್ಯಶಿಕ್ಷಕರು, ಪ್ರಾಧ್ಯಾಪಕರು, ಶಿಕ್ಷಕ-ಶಿಕ್ಷಕಿಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

ಸಚಿತ್ ಭಟ್ ಸ್ವಾಗತಿಸಿ, ತೌಪಿರ ವಂದಿಸಿದರು. ತಸ್ಮಯಿ, ಸಚಿತ್ ಭಟ್ ಮತ್ತು ಸ್ಪೂರ್ತಿ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

Suddi Udaya

ವೇಣೂರು ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಎಕ್ಸೆಲ್ ಟೆಕ್ನೊ ಸ್ಕೂಲ್ ನ ಪೂರ್ವ ಪ್ರಾಥಮಿಕ ವಿಭಾಗದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಛದ್ಮವೇಷ ಸ್ಪರ್ಧೆ

Suddi Udaya

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!